ಸಿದ್ರಾಮಯ್ಯ ವಿರುದ್ಧ ಸ್ಟಿಂಗ್ ಆರೋಪ ಕೇಸ್ – ʻಕರ್ನಾಟಕ ಹನಿಟ್ರ್ಯಾಪ್ʼ ಯೂಟ್ಯೂಬ್ ಸಬ್ಸ್ಕ್ರೈಬ್ ಆದ 54 ಜನರ ವಿಚಾರಣೆಗೆ ತಯಾರಿ!
– ಸ್ಟಿಂಗ್ ಆಪರೇಷನ್ ಮಾಸ್ಟರ್ ಮೈಂಡ್ ಪತ್ತೆಗೆ ಸೈಬರ್ ಪೊಲೀಸರ ತನಿಖೆ ಚುರುಕು ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ, ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರತಿಯೊಂದು ಅಪ್ಡ

– ಸ್ಟಿಂಗ್ ಆಪರೇಷನ್ ಮಾಸ್ಟರ್ ಮೈಂಡ್ ಪತ್ತೆಗೆ ಸೈಬರ್ ಪೊಲೀಸರ ತನಿಖೆ ಚುರುಕು ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ, ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರತಿಯೊಂದು ಅಪ್ಡೇಟ್ ಅನ್ನು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪಡೆದುಕೊಳ್ಳುತ್ತಿದ್ದಾರೆ. 2 ಆಯಾಮಗಳಲ್ಲಿ ತನಿಖೆ ಪ್ರಕರಣದ ತನಿಖೆಯನ್ನು ಎರಡು ಆಯಾಮಗಳಲ್ಲಿ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ (Sting Operation) ವಿಚಾರದ ಬಗ್ಗೆ ಪೋಸ್ಟ್ ಮಾಡಿದ್ದವರ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು, ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ವಿವರಗಳನ್ನ ಕಲೆಹಾಕಿದ್ದಾರೆ. ಈ ಖಾತೆಗಳಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿರುವ ವ್ಯಕ್ತಿಗಳ ಬಗ್ಗೆಯೂ ಸಿಸಿಬಿ ಸೈಬರ್ ಕ್ರೈಂ ತಂಡ ಮಾಹಿತಿ ಸಂಗ್ರಹಿಸುತ್ತಿದೆ. ಕೆಲವರ ಹೆಸರುಗಳನ್ನ ಉಲ್ಲೇಖಿಸಿ ಕುಮಾರಸ್ವಾಮಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ, ಆ ಆಯಾಮದಲ್ಲೂ ತನಿಖೆ ಮುಂದುವರಿದಿದೆ. ಇದರ ಜೊತೆಗೆ, ಈ ಹಿಂದೆ ರಾಜಕಾರಣಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಟಿಂಗ್ ಮಾಡಿದ್ದ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಹಿಂದೆ ಸ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳು, ಸ್ಟಿಂಗ್ ಆಪರೇಷನ್ ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಂತಹ ವ್ಯಕ್ತಿಗಳನ್ನು ಕರೆಸಿ ವಿಚಾರಣೆ ನಡೆಸಲು ತನಿಖಾ ತಂಡ ಮುಂದಾಗಿದೆ. ಈ ವ್ಯಕ್ತಿಗಳ ಕೈವಾಡ ಸಿದ್ದರಾಮಯ್ಯ ಅವರ ಸ್ಟಿಂಗ್ ವಿಚಾರದಲ್ಲಿ ಇದೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಯೂಟ್ಯೂಬ್ ಚಾನೆಲ್ ತೆರೆದು 4 ವೀಡಿಯೊ ಅಪ್ಲೋಡ್ ಸಿದ್ದರಾಮಯ್ಯ ವೀಡಿಯೊ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 15 ಜನರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸ್ಟಿಂಗ್ನ ಮಾಸ್ಟರ್ ಮೈಂಡ್ ಯಾರು ಎಂಬುದನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವೀಡಿಯೊ ಅಪ್ಲೋಡ್ ಮಾಡುವ ಉದ್ದೇಶಕ್ಕಾಗಿಯೇ ಯೂಟ್ಯೂಬ್ ಚಾನೆಲ್ ತೆರೆಯಲಾಗಿತ್ತು ಎಂಬುದು ಬಯಲಾಗಿದೆ. ‘ಕರ್ನಾಟಕ ಹನಿಟ್ರ್ಯಾಪ್’ ಹೆಸರಿನ ಯೂಟ್ಯೂಬ್ ಚಾನೆಲ್ ತೆರೆಯಲಾಗಿದ್ದು, ಚಾನೆಲ್ ಆರಂಭವಾದ ತಕ್ಷಣವೇ ನಾಲ್ಕು ವೀಡಿಯೊಗಳನ್ನ ಅಪ್ಲೋಡ್ ಮಾಡಲಾಗಿದೆ. ಈ ಚಾನೆಲ್ಗೆ 54 ಜನರು ಸಬ್ಸ್ಕ್ರೈಬ್ ಆಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ 54 ಜನರ ಪಟ್ಟಿಯನ್ನು ಸಿದ್ಧಪಡಿಸಿರುವ ಸೈಬರ್ ಕ್ರೈಂ ಪೊಲೀಸರು, ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಯಾರಾದರೂ ಸಬ್ಸ್ಕ್ರೈಬ್ ಆಗುವಂತೆ ಸೂಚಿಸಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, 54 ಜನರ ಹಿನ್ನೆಲೆಯನ್ನೂ ಪರಿಶೀಲಿಸಲು ಪೊಲೀಸರು ಮುಂದಾಗಿದ್ದಾರೆ. ಅಕ್ಟೋಬರ್ 6ರಂದು ಪ್ರಕರಣ ದಾಖಲಾಗಿದ್ದರೂ, ಈವರೆಗೆ ಮಾಸ್ಟರ್ ಮೈಂಡ್ ಪತ್ತೆಯಾಗಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಕ್ರೈಂ ಪೊಲೀಸರು, ಮಾಸ್ಟರ್ ಮೈಂಡ್ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ. ಇಂದೂ ಕೂಡ ಹಲವರನ್ನು ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.