ಯಶ್ ಬಾಸ್ ಅವರಿಂದ ಇನ್ನೂ ಚೆನ್ನಾಗಿ ಕನ್ನಡ ಕಲಿಯುತ್ತೇನೆ ಎಂದ ರಣಬೀರ್ ಕಪೂರ್
ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟುಹಾಕಿರುವ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ರಣಬೀರ್ ಕಪೂರ್, ಕನ್ನಡದಲ್ಲೇ ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನ

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟುಹಾಕಿರುವ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ರಣಬೀರ್ ಕಪೂರ್, ಕನ್ನಡದಲ್ಲೇ ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಣಬೀರ್ ಕಪೂರ್, ಮೊದಲು ‘ಜೈ ಶ್ರೀರಾಮ್‘ ಎಂದು ಹೇಳಿ, ನಂತರ ‘ನಮಸ್ಕಾರ ಬೆಂಗಳೂರು, ನಿಮ್ಮ ಪ್ರೀತಿ ಮತ್ತು ಆಶೀರ್ವಾದಕ್ಕೆ ತುಂಬಾ ಧನ್ಯವಾದಗಳು‘ ಎಂದು ಕನ್ನಡದಲ್ಲಿ ಶುಭಾಶಯ ಕೋರಿದರು.PHOTOS: ಪ್ರೇಮದ ಊರಲಿ ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ನಟ ಯಶ್75ರ ವೃದ್ಧನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ 30ರ ಯುವತಿ; ಶೀಘ್ರದಲ್ಲೇ ಮದುವೆ! ಇದೇ ವೇಳೆ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ಯಶ್ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ ರಣಬೀರ್, ‘ಈ ಬಾರಿ ಇಷ್ಟೇ ಕನ್ನಡ ಕಲಿತ್ಕೊಂಡು ಬಂದಿದ್ದೀನಿ, ಯಶ್ ಬಾಸ್ ಅವರಿಂದ ಇನ್ನೂ ಚೆನ್ನಾಗಿ ಕನ್ನಡ ಕಲಿಯುತ್ತೇನೆ‘ ಎಂದು ಹೇಳಿದರು. ರಣಬೀರ್ ಅವರ ಈ ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿಖಿಲ್ ತಿವಾರಿ ನಿರ್ದೇಶನದ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ಮೊದಲ ಭಾಗವು 2026ರ ನವೆಂಬರ್ 5ರಂದು ವಿಶ್ವದಾದ್ಯಂತ ತೆರೆಕಾಣಲಿದೆ, ಎರಡನೇ ಭಾಗವನ್ನು 2027ರ ದೀಪಾವಳಿ ಹಬ್ಬದ ವೇಳೆಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.Will it be an Internet bereaking Video from today's event !!?#RanbirKapoor x #Yash Bromance ♥️ pic.twitter.com/hFc4XCbWF0— Dr. BUNNY (@RanbirxHrithik) October 15, 2026 ಸ್ಟಿಂಗ್ ಆಪರೇಷನ್: ರಾಷ್ಟ್ರಮಟ್ಟದಲ್ಲಿ ರಾಜ್ಯದ ಮರ್ಯಾದೆ ಹರಾಜು–ಎಚ್ಡಿಕೆಪ್ರಕೃತಿ ಮಡಿಲು: ಕೆರೆಗಳ ನಗರಿ ಬೆಂಗಳೂರಿನಲ್ಲಿ ಒಂದು ಜಲಮೂಲವೂ ಯೋಗ್ಯವಲ್ಲ!