ಕಾವೇರಿ ಆರತಿಗೆ ₹100 ಕೋಟಿ ಮೀಸಲು: ಡಿ.ಕೆ. ಶಿವಕುಮಾರ್
ಮಂಡ್ಯ: ಕಾವೇರಿ ಮತ್ತು ತುಂಗಭದ್ರಾ ಜಲಾಶಯಗಳ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಿ, ನೀರಿನ ವ್ಯರ್ಥ ತಡೆಯಲು ಹೂಳೆತ್ತುವ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಕೆಆರ್ಎಸ್ ಬೃಂದಾವನದಲ್ಲಿ ಶುಕ್ರವಾರ ‘ಕಾವೇರಿ ಆರತಿ’ಗೆ ಚಾಲನೆ ನೀಡಿ ಮಾತನಾಡಿದ ಅವರು, ಹೂಳೆತ್ತುವ ಕಾರ್ಯಕ್ಕೆ ಯೋಜನೆ ರೂಪಿಸಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ
ಮಂಡ್ಯ: ಕಾವೇರಿ ಮತ್ತು ತುಂಗಭದ್ರಾ ಜಲಾಶಯಗಳ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಿ, ನೀರಿನ ವ್ಯರ್ಥ ತಡೆಯಲು ಹೂಳೆತ್ತುವ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಕೆಆರ್ಎಸ್ ಬೃಂದಾವನದಲ್ಲಿ ಶುಕ್ರವಾರ ‘ಕಾವೇರಿ ಆರತಿ’ಗೆ ಚಾಲನೆ ನೀಡಿ ಮಾತನಾಡಿದ ಅವರು, ಹೂಳೆತ್ತುವ ಕಾರ್ಯಕ್ಕೆ ಯೋಜನೆ ರೂಪಿಸಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅನುಸರಿಸುತ್ತಿರುವ ಆಧುನಿಕ ವಿಧಾನಗಳನ್ನು ಅಧ್ಯಯನ ಮಾಡಿ, ಕರ್ನಾಟಕದಲ್ಲೂ ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.ಕಾವೇರಿ ಆರತಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ₹100 ಕೋಟಿ ಮೀಸಲಿಡಲಾಗಿದೆ. ಬಯಲು ರಂಗಮಂದಿರ ನಿರ್ಮಿಸಿ, ಪ್ರತಿ ವಾರ ಆರತಿ ಆಯೋಜಿಸುವ ಯೋಜನೆಯೂ ಇದೆ ಎಂದು ಹೇಳಿದರು.ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಮುಂದಿನ ಬಜೆಟ್ನಲ್ಲಿ ಅನುದಾನ ಒದಗಿಸಿ, ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ನಡೆದಿದೆ. ಯೋಜನೆಗೆ ಅಗತ್ಯವಿರುವ 5,000 ಹೆಕ್ಟೇರ್ಗೂ ಹೆಚ್ಚು ಅರಣ್ಯಭೂಮಿಗೆ ಪರ್ಯಾಯ ಭೂಮಿ ಗುರುತಿಸುವ ಕಾರ್ಯವೂ ನಡೆಯುತ್ತಿದೆ ಎಂದರು.ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಪೂರೈಸುವಾಗ ರೈತರ ನೀರಾವರಿ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕ್ರಮ ವಹಿಸಲಾಗುವುದು. ಕಾವೇರಿ ನದಿಯ ಸಂರಕ್ಷಣೆ ಮತ್ತು ಸಾಂಸ್ಕೃತಿಕ ಪರಂಪರೆ ಉಳಿಸಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.