ಸ್ಟಿಂಗ್ ಆಪರೇಷನ್: ರಾಷ್ಟ್ರಮಟ್ಟದಲ್ಲಿ ರಾಜ್ಯದ ಮರ್ಯಾದೆ ಹರಾಜು–ಎಚ್ಡಿಕೆ
ಬಿಡದಿ: ‘ಸ್ಟಿಂಗ್ ಆಪರೇಷನ್ ಬಿರುಗಾಳಿಯು ರಾಜ್ಯದ ಮಾನ ಮರ್ಯಾದೆಯನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕುವ ಬೆಳವಣಿಗೆಯಾಗಿದೆ. ಈ ವಿಷಯದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಹೇಳಿರುವಂತೆ ₹15 ಕೋಟಿಗೂ ಹೆಚ್ಚು ಹಣದ ವ್ಯವಹಾರ ನಡೆದಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ

ಬಿಡದಿ: ‘ಸ್ಟಿಂಗ್ ಆಪರೇಷನ್ ಬಿರುಗಾಳಿಯು ರಾಜ್ಯದ ಮಾನ ಮರ್ಯಾದೆಯನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕುವ ಬೆಳವಣಿಗೆಯಾಗಿದೆ. ಈ ವಿಷಯದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಹೇಳಿರುವಂತೆ ₹15 ಕೋಟಿಗೂ ಹೆಚ್ಚು ಹಣದ ವ್ಯವಹಾರ ನಡೆದಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಪರವಾಗಿ ಪಕ್ಷದ ಮುಖಂಡರೊಂದಿಗೆ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸ್ಟಿಂಗ್ ವಿಷಯದಲ್ಲಿ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರವೇಶಿಸಿದರೆ, ಬೇರೆಯದ್ದೆ ಆಯಾಮದೊಂದಿಗೆ ದೊಡ್ಡಮಟ್ಟದ ಬೆಳವಣಿಗೆ ಕಾರಣವಾಗಲಿದೆ’ ಎಂದರು.
Read the complete story at Prajavani