ಸಾಗರ | ಹಾವು ಕಚ್ಚಿ ಎರಡು ವರ್ಷದ ಮಗು ದುರ್ಮರಣ
ಶಿವಮೊಗ್ಗ: ಮನೆಯ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಹಾವು (Snake) ಕಚ್ಚಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ (Sagar) ತಾಲೂಕಿನ ಕಲಸಿಪೇಟೆ ಗ್ರಾಮದಲ್ಲಿ ನಡೆದಿದೆ. ಯುನೈ (2) ಹಾವು ಕಚ್ಚಿ ಮೃತಪಟ್ಟ ಬಾಲಕ. ನಾಡಕಲಸಿ ಗ್ರಾ.ಪಂ ವ್ಯಾಪ್ತಿಯ ಕಲಸಿಪೇಟೆಯ ನಿವಾಸಿಗಳಾದ ಅನಿಲ್ ಹಾಗೂ ರೂಪ ದಂಪತಿಯ ಪುತ್ರ ಯುನೈ ಮನೆಯ ಬಳಿ ಆಟವಾಡುತ್ತಿದ್ದ. ಈ ವೇಳೆ ಮಗುವಿಗೆ

ಶಿವಮೊಗ್ಗ: ಮನೆಯ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಹಾವು (Snake) ಕಚ್ಚಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ (Sagar) ತಾಲೂಕಿನ ಕಲಸಿಪೇಟೆ ಗ್ರಾಮದಲ್ಲಿ ನಡೆದಿದೆ. ಯುನೈ (2) ಹಾವು ಕಚ್ಚಿ ಮೃತಪಟ್ಟ ಬಾಲಕ. ನಾಡಕಲಸಿ ಗ್ರಾ.ಪಂ ವ್ಯಾಪ್ತಿಯ ಕಲಸಿಪೇಟೆಯ ನಿವಾಸಿಗಳಾದ ಅನಿಲ್ ಹಾಗೂ ರೂಪ ದಂಪತಿಯ ಪುತ್ರ ಯುನೈ ಮನೆಯ ಬಳಿ ಆಟವಾಡುತ್ತಿದ್ದ. ಈ ವೇಳೆ ಮಗುವಿಗೆ ಹಾವು ಕಚ್ಚಿದೆ. ಇದನ್ನ ಗಮನಿಸಿ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಗು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ದೇಶದಲ್ಲೇ ಹಾವು ಕಡಿತ ಪ್ರಕರಣದಲ್ಲಿ ಕರ್ನಾಟಕ ಮುಂಚೂಣಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಆಶ್ರಮ ಶಾಲೆಯಲ್ಲಿ 6 ವಿದ್ಯಾರ್ಥಿನಿಯರಿಗೆ ಹಾವು ಕಡಿತ – ಮೂವರ ಸಾವು; ಓರ್ವಳಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ
Read the complete story at Public TV Kannada