‘ಲೆಹರಾ ದೋ ತಿರಂಗಾ’: CJP ಪ್ರತಿಭಟನೆಗೆ ಪೊಲೀಸರ ತಡೆ; ಬೀದಿಗಿಳಿದ ಯುವಕರು
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ, ಕಾಕ್ರೋಚ್ ಜನತಾ ಪಕ್ಷ (CJP) ಹಾಗೂ ಇತರ ಪಕ್ಷ, ಸಂಘಟನೆಗಳ ಸದಸ್ಯರು ಶುಕ್ರವಾರ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ‘ಲೆಹರಾ ದೋ ತಿರಂಗಾ’ ಅಭಿಯಾನದಡಿ ನಡೆದ ಪ್ರತಿಭಟನೆಗೂ ಮುನ್ನ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ, AISA ಅಧ್ಯಕ್ಷೆ ನೇಹಾ ಬೋರಾ ಸೇರಿದಂತೆ ಹಲವ

ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ, ಕಾಕ್ರೋಚ್ ಜನತಾ ಪಕ್ಷ (CJP) ಹಾಗೂ ಇತರ ಪಕ್ಷ, ಸಂಘಟನೆಗಳ ಸದಸ್ಯರು ಶುಕ್ರವಾರ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ‘ಲೆಹರಾ ದೋ ತಿರಂಗಾ’ ಅಭಿಯಾನದಡಿ ನಡೆದ ಪ್ರತಿಭಟನೆಗೂ ಮುನ್ನ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ, AISA ಅಧ್ಯಕ್ಷೆ ನೇಹಾ ಬೋರಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಕೆಲವು ಯುವಕರು ತಾವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಬಂದಿಲ್ಲ. ಶಾಂತಿಯುತ ಪ್ರತಿಭಟನೆ ನಡೆಸುವುದು ಮತ್ತು ರಾಷ್ಟ್ರಧ್ವಜ ಹಿಡಿಯುವುದು ತಮ್ಮ ಹಕ್ಕು ಎಂದು ಪ್ರತಿಪಾದಿಸಿದರು.
Read the complete story at Prajavani