PHOTOS: ಪ್ರೇಮದ ಊರಲಿ ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ನಟ ಯಶ್
ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ದಾಖಲೆ ಬರೆಯುತ್ತಿರುವ ಚಿತ್ರತಂಡವನ್ನು ಖುದ್ದಾಗಿ ಭೇಟಿಗೆ ಆಹ್ವಾನಿಸಿದ ಯಶ್, ಚಿತ್ರದ ಗೆಲುವಿಗೆ ಬೆನ್ನುತಟ್ಟಿ, ಮುಂದಿನ ಪಯಣಕ್ಕೆ ಹೃತ್ಪೂರ್ವ

ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ದಾಖಲೆ ಬರೆಯುತ್ತಿರುವ ಚಿತ್ರತಂಡವನ್ನು ಖುದ್ದಾಗಿ ಭೇಟಿಗೆ ಆಹ್ವಾನಿಸಿದ ಯಶ್, ಚಿತ್ರದ ಗೆಲುವಿಗೆ ಬೆನ್ನುತಟ್ಟಿ, ಮುಂದಿನ ಪಯಣಕ್ಕೆ ಹೃತ್ಪೂರ್ವಕ ಶುಭ ಹಾರೈಸಿದ್ದಾರೆ.ಈ ವೇಳೆ ‘ಪ್ರೇಮದ ಊರಲಿ’ ಚಿತ್ರತಂಡದ ಜೊತೆಗೆ ನಟಿ ರಾಧಿಕಾ ಪಂಡಿತ್ ಹಾಗೂ ನಟ ಯಶ್ ಅವರು ಫೋಟೊ ಪೋಸ್ ಕೊಟ್ಟಿದ್ದಾರೆ. ಈ ಫೋಟೊಗಳನ್ನು ಹರೀಶ್ ಅರಸು ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ನಡೆದ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ನಟ ಯಶ್ ಪ್ರೇಮದ ಊರಲಿ ಸಿನಿಮಾ ಯಶಸ್ವಿ ಪಯಣದಲ್ಲಿ ಬಗ್ಗೆ ಮಾಡತನಾಡಿದ್ದಾರೆ.ಮನೋಜ್ ಕುಮಾರ್ ನಿರ್ದೇಶನದ ಹಾಗೂ ‘ವೆನಿಲ್ಲಾ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.