ಪುತ್ತೂರಿನಲ್ಲಿ ಇಂದು ‘ಪುತ್ತೂರುದ ಪಿಲಿಗೊಬ್ಬು’ ಸೀಸನ್ 4
ಪುತ್ತೂರು: ವಿಜಯ ಸಾಮ್ರಾಟ್ ಸಂಘಟನೆಯ ಸಾರಥ್ಯದಲ್ಲಿ ‘ಪುತ್ತೂರುದ ಪಿಲಿಗೊಬ್ಬು- ಸೀಸನ್ 4’ ಸಮಿತಿಯ ಸಹಭಾಗಿತ್ವದೊಂದಿಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಅ.17ರಂದು ಪುತ್ತೂರುದ ಪಿಲಿಗೊಬ್ಬು ನಡೆಯಲಿದೆ. ಈ ಬಾರಿ ವಿಜೇತ ತಂಡಗಳಿಗೆ ಆಕರ್ಷಕ ಬಹುಮಾನವಿದೆ ಎಂದು ವಿಜಯ ಸಾಮ್ರಾಟ್ ಸಂಸ್ಥಾಪಕ ಸಹಜ್ ರೈ ಬಳಜ್ಜ ಹೇಳಿದರು.ಪುತ್ತೂರಿನಲ್ಲಿ

ಪುತ್ತೂರು: ವಿಜಯ ಸಾಮ್ರಾಟ್ ಸಂಘಟನೆಯ ಸಾರಥ್ಯದಲ್ಲಿ ‘ಪುತ್ತೂರುದ ಪಿಲಿಗೊಬ್ಬು- ಸೀಸನ್ 4’ ಸಮಿತಿಯ ಸಹಭಾಗಿತ್ವದೊಂದಿಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಅ.17ರಂದು ಪುತ್ತೂರುದ ಪಿಲಿಗೊಬ್ಬು ನಡೆಯಲಿದೆ. ಈ ಬಾರಿ ವಿಜೇತ ತಂಡಗಳಿಗೆ ಆಕರ್ಷಕ ಬಹುಮಾನವಿದೆ ಎಂದು ವಿಜಯ ಸಾಮ್ರಾಟ್ ಸಂಸ್ಥಾಪಕ ಸಹಜ್ ರೈ ಬಳಜ್ಜ ಹೇಳಿದರು.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತುಳುನಾಡಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ 3 ವರ್ಷಗಳಿಂದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಆಯೋಜಿಸಲಾಗುತ್ತಿದೆ ಎಂದರು.ಅ.17ರಂದು ಬೆಳಿಗ್ಗೆ 10.30ಕ್ಕೆ ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷತೆ ವಹಿಸುವರು. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯ ದರ್ಶಿ ಪ್ರೀತಂ ಜೆ.ಗೌಡ, ಜಿಲ್ಲೆಯ ಸಂಸ ದರು, ಶಾಸಕರು, ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸುವರು ಎಂದರು.ಈ ಬಾರಿಯ ಪಿಲಿಗೊಬ್ಬು ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರಸಿದ್ಧ 9 ಆಯ್ದ ಹುಲಿವೇಷ ತಂಡಗಳು ಭಾಗವಹಿಸಲಿವೆ. ಅತ್ಯುತ್ತಮ ಪ್ರದರ್ಶನ ನೀಡುವ ತಂಡಕ್ಕೆ ಪ್ರಥಮ ಬಹುಮಾನವಾಗಿ ₹ 4 ಲಕ್ಷ, ದ್ವಿತೀಯ ಬಹುಮಾನವಾಗಿ ₹ 3 ಲಕ್ಷ ಹಾಗೂ ತೃತೀಯ ಬಹುಮಾನವಾಗಿ ₹ 2 ಲಕ್ಷ ನೀಡಲಾಗುವುದು. ಪ್ರೋತ್ಸಾಹಕ ಬಹುಮಾನಗಳಿವೆ. ಭಾಗವಹಿಸುವ ಎಲ್ಲ ತಂಡಗಳಿಗೂ ₹60 ಸಾವಿರ ಗೌರವ ಸಂಭಾವನೆ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ ಪ್ರಶಸ್ತಿ ಹಾಗೂ ಗುಂಪು ಪ್ರಶಸ್ತಿ ವಿಭಾಗಗಳಲ್ಲಿ ಉತ್ತಮ ತಾಸೆ, ಉತ್ತಮ ಬಣ್ಣ ಮತ್ತು ಉತ್ತಮ ಧರಣಿ ಮಂಡಲ ಕುಣಿತಕ್ಕೆ ಪ್ರಶಸ್ತಿಗಳನ್ನು ನೀಡಲಾಗುವುದು. ವೈಯಕ್ತಿಕ ವಿಭಾಗದಲ್ಲಿ ಕಪ್ಪು ಹುಲಿ, ಮರಿ ಹುಲಿ, ಪುತ್ತೂರುದ ಹುಲಿ, ಮುಡಿ ಹಾರಿಸುವುದು ಮತ್ತು ನಾಣ್ಯ ತೆಗೆಯುವುದು ಸೇರಿದಂತೆ ವಿವಿಧ ಸ್ಪರ್ಧೆಗಳಿಗೆ ವಿಶೇಷ ಬಹುಮಾನಗಳಿವೆ ಎಂದು ಅವರು ಹೇಳಿದರು.ಹುಲಿವೇಷ ಕುಣಿತ ಕ್ಷೇತ್ರದಲ್ಲಿ ಅನುಭವ ಮತ್ತು ಪರಿಣತಿ ಹೊಂದಿರುವ ನವನೀತ್ ಶೆಟ್ಟಿ, ಟೈಗರ್ ಕ್ಯಾಂಪ್ ರಾಜ, ಸತೀಶ್ ಹೊಯಿಗೆ ಬಜಾರ್, ಗಿರೀಶ್ ನಾರಾಯಣ್ ಅವರು ತೀರ್ಪುಗಾರರಾಗಿ ಭಾಗವಹಿಸುವರು. ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ತಾರಾ ಮೆರುಗು ನೀಡಲು ಬಾಲಿವುಡ್ ನಟ ಸೋನು ಸೂದ್, ಕರಾವಳಿಯ ಪೃಥ್ವಿ ಅಂಬರ್, ಇನ್ಪ್ಲುಯೆನ್ಸರ್ಗಳಾದ ಶ್ರವಣ್, ಚರಣ್ ಚಿಲಿಂಬಿ, ನಟ ನಟಿಯರು ಭಾಗವಹಿಸುವರು ಎಂದು ಅವರು ತಿಳಿಸಿದರು.ಪಿಲಿಗೊಬ್ಬು ಕಾರ್ಯಕ್ರಮದೊಂದಿಗೆ ಪುತ್ತೂರು ಫುಡ್ ಫೆಸ್ಟ್ ನಡೆಯಲಿದೆ. ಅಕ್ಟೋಬರ್ 17 ರಂದು ಬೆಳಿಗ್ಗೆ 10 ರಿಂದ ರಾತ್ರಿ 10 ರವರೆಗೆ ಹಾಗೂ ಅಕ್ಟೋಬರ್ 18 ರಂದು ಬೆಳಿಗ್ಗೆ 10 ರಿಂದ ರಾತ್ರಿ 10 ರವರೆಗೆ ಫುಡ್ ಫೆಸ್ಟ್ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.ವಿಜಯ ಸಾಮ್ರಾಟ್ ಸಂಘಟನೆಯ ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷ ರತನ್ ರೈ ಕುಂಬ್ರ, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಕೋಶಾಧಿಕಾರಿ ಅಶೋಕ್ ಅಡೂರ್ ಭಾಗವಹಿಸಿದ್ದರು.261017-29-312227652