ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ಕಂದಕಕ್ಕೆ ಉರುಳಿದ ಬಸ್ – 8 ಮಂದಿ ದುರ್ಮರಣ, 17 ಜನರಿಗೆ ಗಾಯ
ಜೈಪುರ: ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ (Delhi-Mumbai Expressway) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ವೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 17 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಸ್ಥಾನದ (Rajasthan) ಕೋಟಾ (Kota) ಪ್ರದೇಶದಲ್ಲಿ ಇಂದು ಮುಂಜಾನೆ ಈ

ಜೈಪುರ: ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ (Delhi-Mumbai Expressway) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ವೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 17 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಸ್ಥಾನದ (Rajasthan) ಕೋಟಾ (Kota) ಪ್ರದೇಶದಲ್ಲಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಮಧ್ಯಪ್ರದೇಶದ ಭೋಪಾಲ್ನಿಂದ ಖಾಟು ಶ್ಯಾಮ್ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ನಲ್ಲಿ ಒಟ್ಟು 27 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ನಾಲ್ಕು ಅಂಬುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತದಲ್ಲಿ ಮೃತಪಟ್ಟ ಎಂಟು ಮಂದಿಯಲ್ಲಿ ಐವರು ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಅರುಣಾ, ವೈಷ್ಣವಿ, ತ್ರಿಷಾ, ಕೃಷ್ಣ, ಅನಿತಾ, ಓಂ, ಸೂರ್ಯವಂಶಿ ಮತ್ತು ರಾಜು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ತಲಕಾವೇರಿ ತಲುಪಿದ ದೇವರ ಭಂಡಾರ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಜಿಲ್ಲಾ ಕಲೆಕ್ಟರ್ ಪಿಯೂಷ್ ಸಮಾರಿಯಾ ಮತ್ತು ಐಜಿ ಹರೇಂದ್ರ ಮಹಾವರ್ ಅವರು ಎಂ.ಬಿ.ಎಸ್. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ ಚಾಲಕ ನಿದ್ರೆಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ಮತ್ತಷ್ಟು ಸ್ಪಷ್ಟವಾಗಬೇಕಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ದಾಖಲೆಯ ಟ್ರಾಫಿಕ್ ಜಾಮ್ – 6 ಗಂಟೆ ರಸ್ತೆಯಲ್ಲೇ ಸಿಲುಕಿದ ಪ್ರಯಾಣಿಕರು!