ನೇಹಾ ಬೋರಾ ರಿಲೀಸ್, ಪೊಲೀಸರ ಬಂಧನದಲ್ಲಿರೋ ದೀಪ್ಕೆ ಇಂದು ಕೋರ್ಟ್ಗೆ ಹಾಜರ್
ನವದೆಹಲಿ: ಕಾನಾಟ್ ಪ್ಲೇಸ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ‘ಲೆಹ್ರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸುವ) ಯಾತ್ರೆಗೂ ಮುನ್ನವೇ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಅವರನ್ನ ಮುಂಜಾಗ್ರತಾ ಬಂಧನದಲ್ಲಿ ಇರಿಸಲಾಗಿದೆ. ಇದೇ ವೇಳೆ, ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂ

ನವದೆಹಲಿ: ಕಾನಾಟ್ ಪ್ಲೇಸ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ‘ಲೆಹ್ರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸುವ) ಯಾತ್ರೆಗೂ ಮುನ್ನವೇ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಅವರನ್ನ ಮುಂಜಾಗ್ರತಾ ಬಂಧನದಲ್ಲಿ ಇರಿಸಲಾಗಿದೆ. ಇದೇ ವೇಳೆ, ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ (AISA) ಅಧ್ಯಕ್ಷೆ ನೇಹಾ ಬೋರಾ (Neha Bora) ಅವರನ್ನ ಬಿಡುಗಡೆ ಮಾಡಲಾಗಿದೆ. #WATCH | Delhi: AISA National President Neha Bora has been released from detention by the Delhi Police after completion of formal procedures under Section 65 of the Delhi Police Act. She was detained under preventive sections on the evening of October 16. https://t.co/eD2YVqSKUV — ANI (@ANI) October 17, 2026 ದೀಪ್ಕೆ ವಿರುದ್ಧ ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ (BNSS)ಯ ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಇಂದು (ಅ.17) ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಮುಂದೆ ಹಾಜರುಪಡಿಸಲಾಗುತ್ತದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸಿಜೆಪಿ ಸಂಸ್ಥಾಪಕರಿಗೆ 2 ನೋಟಿಸ್ಗಳನ್ನ ನೀಡಲಾಗಿತ್ತು. 50,000 ರೂಪಾಯಿ ಬಾಂಡ್ (ಮುಚ್ಚಳಿಕೆ ಪತ್ರ) ಮೇಲೆ 1 ವರ್ಷದ ಅವಧಿಗೆ ಸಾರ್ವಜನಿಕ ಶಾಂತಿಗೆ ಭಂಗ ತರದಂತೆ ಅವರಿಗೆ ಸೂಚಿಸಲಾಗಿತ್ತು. ನಿಯಮ ಉಲ್ಲಂಘನೆ ಮಾಡಿದ್ದರಿಂದ ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಲ್ಲದೇ ಪ್ರತಿಭಟನೆ ಸಂದರ್ಭದಲ್ಲಿ ಸುಮಾರು 150 ಮಂದಿಯನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.