ಅತೃಪ್ತರಿಂದ ಅರಾಜಕತೆಗೆ ಹುನ್ನಾರ: ಬಸವರಾಜ ಬೊಮ್ಮಾಯಿ ಆರೋಪ
ಮುಂಡರಗಿ: ‘ಜಗತ್ತಿನ ಬಹುತೇಕ ಯುವಕರು ಎಐ ಸೇರಿದಂತೆ ಹಲವಾರು ತಂತ್ರಜ್ಞಾನಗಳ ಕೈಗೊಂಬೆಯಾಗುತ್ತಿದ್ದು, ಮೊಬೈಲ್ನಲ್ಲಿ ಬರುವುದೆಲ್ಲ ಸತ್ಯ ಎಂದು ಭಾವಿಸುತ್ತಿದ್ದಾರೆ. ಇದರ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವು ಅತೃಪ್ತರು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಜಗತ್ತಿನ ಸುಮಾರು 55 ದೇಶಗಳಲ್ಲಿ ಅರಾಜಕತೆ ಸೃಷ್ಟಿಸಲು ಅಂತಹ ಜನರು ಪ್ರಯತ್ನಿಸುತ್ತಿದ್ದಾರ

ಮುಂಡರಗಿ: ‘ಜಗತ್ತಿನ ಬಹುತೇಕ ಯುವಕರು ಎಐ ಸೇರಿದಂತೆ ಹಲವಾರು ತಂತ್ರಜ್ಞಾನಗಳ ಕೈಗೊಂಬೆಯಾಗುತ್ತಿದ್ದು, ಮೊಬೈಲ್ನಲ್ಲಿ ಬರುವುದೆಲ್ಲ ಸತ್ಯ ಎಂದು ಭಾವಿಸುತ್ತಿದ್ದಾರೆ. ಇದರ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವು ಅತೃಪ್ತರು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಜಗತ್ತಿನ ಸುಮಾರು 55 ದೇಶಗಳಲ್ಲಿ ಅರಾಜಕತೆ ಸೃಷ್ಟಿಸಲು ಅಂತಹ ಜನರು ಪ್ರಯತ್ನಿಸುತ್ತಿದ್ದಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.‘ಸುಸಂಸ್ಕೃತಿಯ ತಳಹದಿ ಮೇಲೆ ನಮ್ಮ ಸಂವಿಧಾನ ರಚನೆಯಾಗಿದ್ದು, ಇಲ್ಲಿ ಅರಾಜಕತೆ ಸೃಷ್ಟಿಸಲು ಸಾಧ್ಯವಿಲ್ಲ. ಲೊಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ ಗೆಲ್ಲದೆ ಪ್ರಧಾನಿಯಾಗುವ ಕನಸು ಕಾಣುತ್ತಿದ್ದು, ಎಲ್ಲ ಇಲಾಖೆಗಳ ಮೇಲೆ ನಿತ್ಯ ಇಲ್ಲಸಲ್ಲದ ಆರೋಪ ಮಾಡುತ್ತಲಿದ್ದಾರೆ’ ಎಂದು ದೂರಿದರು.ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ‘ಬಿಜೆಪಿ ಕಾರ್ಯಕರ್ತರಿಗೆ ಹಲವಾರು ಚುನಾವಣೆಗಳನ್ನು ಎದುರಿಸಿರುವ ಅನುಭವವಿದೆ. ಹೀಗಾಗಿ ನಮ್ಮ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ’ ಎಂದು ತಿಳಿಸಿದರು.ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, ‘ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಒಬ್ಬ ಸಜ್ಜನ ಹಾಗೂ ಸುಶಿಕ್ಷಿತ ಅಭ್ಯರ್ಥಿಯಾಗಿದ್ದು, ಎಲ್ಲ ಪದವೀಧರರು ಅವರಿಗೆ ತಮ್ಮ ಮೊದಲ ಪ್ರಾಶಸ್ಯ್ತದ ಮತ ನೀಡಬೇಕು’ ಎಂದು ಮನವಿ ಮಾಡಿಕೊಂಡರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಶಿವಕುಮಾರಗೌಡ ಪಾಟೀಲ, ಕೆ.ವಿ. ಹಂಚಿನಾಳ, ಆನಂದಗೌಡ ಪಾಟೀಲ, ಹೇಮಗಿರಿಶ ಹಾವಿನಾಳ, ರವಿ ಉಪ್ಪಿನಬೆಟಗೇರಿ, ಎಂ.ಎಸ್.ಕರಿಗೌಡರ, ಜಯತೀರ್ಥ, ಅಂದಪ್ಪ ಹಾರೋಗೇರಿ, ಬಸವರಾಜ ಬಿಳಿಮಗ್ಗದ, ಪ್ರಶಾಂತ ಗುಡದಪ್ಪನವರ, ಪವಿತ್ರಾ ಕಲ್ಲಕುಟಿಗರ, ಎಸ್.ವಿ.ಪಾಟೀಲ, ಕೆ.ಎಫ್.ಅಂಗಡಿ ಇದ್ದರು.261017-23-1472062437