ಗೃಹಜ್ಯೋತಿ ಸಮೀಕ್ಷೆ ಅವಧಿ ವಿಸ್ತರಣೆ: ಅ.31ರೊಳಗೆ ದಾಖಲೆ ಸಲ್ಲಿಸಲು ಸೂಚನೆ
ಚಿಕ್ಕಬಳ್ಳಾಪುರ: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹಜ್ಯೋತಿ ಫಲಾನುಭವಿಗಳ ಮನೆ- ಮನೆ ಸಮೀಕ್ಷೆ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು ಅ.31ರೊಳಗೆ ಹತ್ತಿರದ ಬೆಸ್ಕಾಂ ಕಚೇರಿಗೆ ಖುದ್ದಾಗಿ ತೆರಳಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಸಮೀಕ್ಷೆ ಸಂದರ್ಭದಲ್ಲಿ ಬೆಸ್ಕಾಂ ವ

ಚಿಕ್ಕಬಳ್ಳಾಪುರ: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹಜ್ಯೋತಿ ಫಲಾನುಭವಿಗಳ ಮನೆ- ಮನೆ ಸಮೀಕ್ಷೆ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು ಅ.31ರೊಳಗೆ ಹತ್ತಿರದ ಬೆಸ್ಕಾಂ ಕಚೇರಿಗೆ ಖುದ್ದಾಗಿ ತೆರಳಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಸಮೀಕ್ಷೆ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 16.09 ಲಕ್ಷ ಮನೆಗೆ ಬೀಗ ಹಾಕಿರುವ ಮನೆಗಳು ಹಾಗೂ 28,519 ಖಾಲಿ ಇರುವ ಮನೆಗಳನ್ನು ಗುರುತಿಸಲಾಗಿದೆ. ಈ ಗ್ರಾಹಕರಿಗೆ ಒಂದು ಬಾರಿ ಅವಕಾಶ ಕಲ್ಪಿಸುವ ಸಲುವಾಗಿ ಈ ತಿಂಗಳ 31ರೊಳಗೆ ಖುದ್ದು ಬೆಸ್ಕಾಂ ಉಪವಿಭಾಗ ಕಚೇರಿಗೆ ಬಂದು ದಾಖಲೆ ಸಲ್ಲಿಸಲು ವಿನಂತಿಸಲಾಗಿದೆ. ದಾಖಲೆಗಳ ಪರಿಶೀಲನೆಗೆ ಇದು ಕೊನೆ ಅವಕಾಶ ಎಂದು ಚಿಕ್ಕಬಳ್ಳಾಪುರ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪಿ.ಜಿ.ರಮೇಶ್ ಕುಮಾರ್ ತಿಳಿಸಿದ್ದಾರೆ.261017-16-1710029012
Read the complete story at Prajavani