ಸಿಇಸಿ ಜ್ಞಾನೇಶ್ ಕುಮಾರ್ ‘ವೋಟ್ ಚೋರಿ’ ಜಾರಿಗೆ ತಂದಿದ್ದಾರೆ: ರಾಹುಲ್ ಗಾಂಧಿ ಆರೋಪ
ಗೋವಾ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 'ವೋಟ್ ಚೋರಿ' ಜಾರಿಗೆ ತಂದಿದ್ದಾರೆ. ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಬೆಂಬಲ ನೀಡುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ತಿಳಿದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಗೋವಾದ ಮರ್ಗೋವಾದಲ್ಲಿ ಆಯೋಜಿಸಿದ್ದ ‘ಗೋಯ್ ರಖೋನ್’ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ಮುಖ್ಯ
ಗೋವಾ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 'ವೋಟ್ ಚೋರಿ' ಜಾರಿಗೆ ತಂದಿದ್ದಾರೆ. ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಬೆಂಬಲ ನೀಡುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ತಿಳಿದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಗೋವಾದ ಮರ್ಗೋವಾದಲ್ಲಿ ಆಯೋಜಿಸಿದ್ದ ‘ಗೋಯ್ ರಖೋನ್’ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ನಮ್ಮಲ್ಲಿ ಮೊದಲು ವಿಶ್ವ ದರ್ಜೆಯ ಶಿಕ್ಷಣ ವ್ಯವಸ್ಥೆ ಇತ್ತು. ಆದರೆ ಈಗ ವಿದ್ಯಾರ್ಥಿಗಳ ಮತ್ತು ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ಗಳನ್ನು ಬಳಸಲಾಗುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕು. ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ರಾಹುಲ್ ಕಿಡಿಕಾರಿದರು.#WATCH | Leader of the Opposition Rahul Gandhi participates in the Goy Rakhonn Yatra in Margao, Goa(Video Source: Goa Congress) pic.twitter.com/xx73gP9KnS— ANI (@ANI) October 18, 2026 ಇದಕ್ಕೂ ಮೊದಲು ದಕ್ಷಿಣ ಗೋವಾದ ಮಾರ್ಗೋವಾದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ 'ಗೋಯ್ ರಖೋನ್ ಯಾತ್ರೆ'ಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿ, ಪಕ್ಷದ ಕಾರ್ಯಕರ್ತರು ಮತ್ತು ನಾಯಕರೊಂದಿಗೆ 2 ಕಿಮೀ ಪಾದಯಾತ್ರೆ ನಡೆಸಿದರು.