ಎನ್ಡಿಎಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಡಾ.ಕೆ.ಸುಧಾಕರ್ ಹೇಳಿಕೆ
ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರವಾಗಿ ಸಂಸದ ಡಾ.ಕೆ.ಸುಧಾಕರ್ ಶನಿವಾರ ವಕೀಲರ ಸಂಘ ಹಾಗೂ ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಯಲ್ಲಿ ಮತಯಾಚಿಸಿದರು.ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಕೆ.ಸುಧಾಕರ್, ‘ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ಬಿಜೆಪಿ ಮತ್ತು ಜೆಡಿಎಸ್ ಎದುರಾಳಿಗಳಾ

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರವಾಗಿ ಸಂಸದ ಡಾ.ಕೆ.ಸುಧಾಕರ್ ಶನಿವಾರ ವಕೀಲರ ಸಂಘ ಹಾಗೂ ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಯಲ್ಲಿ ಮತಯಾಚಿಸಿದರು.ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಕೆ.ಸುಧಾಕರ್, ‘ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ಬಿಜೆಪಿ ಮತ್ತು ಜೆಡಿಎಸ್ ಎದುರಾಳಿಗಳಾಗುತ್ತಿದ್ದವು. ಆದರೆ ಈ ಬಾರಿ ಮೈತ್ರಿ ಪಕ್ಷವು ಕಾಂಗ್ರೆಸ್ ವಿರುದ್ಧ ಸೆಣಸಲಿದೆ. ಈ ಹಿಂದಿನ ಚುನಾವಣೆಗಳನ್ನು ಗಮನಿಸಿದರೆ ಕಾಂಗ್ರೆಸ್ಗೆ ಇಲ್ಲಿ ಬಲವಿಲ್ಲ. ನಮ್ಮ ಪ್ರಾಬಲ್ಯವಿರುವ ಈ ಕ್ಷೇತ್ರವು ಮತ್ತೆ ಎನ್ಡಿಎ ತೆಕ್ಕೆಗೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸದೃಢ ರಾಷ್ಟ್ರ ನಿರ್ಮಾಣ ಬಿಜೆಪಿ ನೇತೃತ್ವದ ಎನ್ಡಿಎಯಿಂದ ಮಾತ್ರ ಸಾಧ್ಯ. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಬೇಕು. ದೇಶದ ಹಿತಾಸಕ್ತಿ ಕಾಪಾಡುವಲ್ಲಿ ಬಿಜೆಪಿ ಎಂದಿಗೂ ಮುಂದಿದೆ ಎಂದರು.ಜೆಡಿಎಸ್ ಮತ್ತು ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿನ ಪ್ರಜ್ಞಾವಂತರ ಮತದಾರರು ಎನ್ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ಅವರನ್ನು ಬೆಂಬಲಿಸಬೇಕು. ಪದವೀಧರರ ಸಮಸ್ಯೆಗಳು ಪರಿಹರಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದು ಹೇಳಿದರು.ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ಸುಬ್ರಹ್ಮಣ್ಯ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಂಸ್ಥೆ ಅಧ್ಯಕ್ಷ ನವೀನ್ ಕಿರಣ್ ಭಾಗವಹಿಸಿದ್ದರು.261018-16-110658684