ಧಾರವಾಡಕ್ಕೆ ತಲುಪಿದ ಪಾದಯಾತ್ರೆ: ಸರ್ಕಾರದ ಮನವಿಗೂ ಜಗ್ಗದ ಕಬ್ಬು ಬೆಳೆಗಾರರು
ಧಾರವಾಡ/ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಿಂದ(Belagavi) ಆರಂಭವಾದ ಕಬ್ಬು ಬೆಳೆಗಾರರ(Sugarcane Farmers) ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಧಾರವಾಡ ಜಿಲ್ಲೆಯನ್ನು ಪ್ರವೇಶಿಸಿದೆ. ಸದ್ಯ ಪ್ರತಿಭಟನಾಕಾರರು ಧಾರವಾಡ(Dharawada) ತಾಲೂಕಿನ ಗುಳೇದಕೊಪ್ಪ ಗ್ರಾಮದಲ್ಲಿ ವಾಸ್ತವ

ಧಾರವಾಡ/ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಿಂದ(Belagavi) ಆರಂಭವಾದ ಕಬ್ಬು ಬೆಳೆಗಾರರ(Sugarcane Farmers) ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಧಾರವಾಡ ಜಿಲ್ಲೆಯನ್ನು ಪ್ರವೇಶಿಸಿದೆ. ಸದ್ಯ ಪ್ರತಿಭಟನಾಕಾರರು ಧಾರವಾಡ(Dharawada) ತಾಲೂಕಿನ ಗುಳೇದಕೊಪ್ಪ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ನ್ನೆಯಷ್ಟೇ ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಅವರು ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲುಗಳನ್ನು ಆಲಿಸಿದ್ದರು ಹಾಗೂ ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದ್ದರು. ಆದರೂ ತಮ್ಮ ನಿಲುವಿನಿಂದ ಹಿಂದೆ ಸರಿಯದ ಬೆಳೆಗಾರರು ಹುಬ್ಬಳ್ಳಿಯತ್ತ ಹೆಜ್ಜೆ ಮುಂದುವರಿಸಿದ್ದಾರೆ. ಇಂದು ಮೈಸೂರಿನಲ್ಲಿಯೂ ಮಾತನಾಡಿದ ಡಿ.ಕೆ. ಶಿವಕುಮಾರ್, ರೈತರ ಹಿತ ನಮಗೆ ಮುಖ್ಯ, ದಯವಿಟ್ಟು ಪ್ರತಿಭಟನೆ ಹಿಂಪಡೆಯಿರಿ ಎಂದು ಪುನರುಚ್ಚರಿಸಿದ್ದಾರೆ. ಸಕ್ಕರೆ(Sugar) ಮೇಲಿನ ಕನಿಷ್ಠ ಮಾರಾಟ ಬೆಲೆ ಹೆಚ್ಚಳ ಕುರಿತು ಘೋಷಣೆ ಮಾಡಲು ರೈತರು ನೀಡಿದ್ದ ಮೂರು ಗಂಟೆಗಳ ಗಡುವು ಯಾವುದೇ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ನಿಯೋಗವು ಬೆಳಗಾವಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳೊಂದಿಗೆ ಗುಳೇದಕೊಪ್ಪಕ್ಕೆ ಭೇಟಿ ನೀಡಿ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಒಂದು ವೇಳೆ ಅಧಿಕಾರಿಗಳು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ಹುಬ್ಬಳ್ಳಿಯತ್ತ ನಮ್ಮ ಪಾದಯಾತ್ರೆಯನ್ನು ಮುಂದುವರಿಸುವುದು ನಿಶ್ಚಿತ” ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೆಪಿಎಸ್ಸಿ ಹಗರಣ ಬಿಜೆಪಿಯವರ ಕೂಸು: ಡಿ.ಕೆ ಶಿವಕುಮಾರ್ ಇನ್ನೊಂದೆಡೆ ಕಾರವಾರದಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಬ್ಬು ಬೆಳೆಗಾರರ ವಿಚಾರದಲ್ಲಿ ಕೆಲವರು ತಪ್ಪು ತಿಳುವಳಿಕೆಯಿಂದ ನನ್ನನ್ನು ಗುರಿ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ ಎಫ್ಆರ್ಪಿ (FRP) ದರವನ್ನು ಹೆಚ್ಚಿಸುತ್ತಲೇ ಬಂದಿದೆ. ಸಕ್ಕರೆ ಎಂಎಸ್ಪಿ ನೇರವಾಗಿ ಕಬ್ಬು ಬೆಳೆಗಾರರಿಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರೈತರ ಪ್ರಮುಖ ಬೇಡಿಕೆಗಳು ಏನು? – ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ರೂ. ದರ ನಿಗದಿಪಡಿಸಬೇಕು. – ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಹೆಚ್ಚಿಸಬೇಕು. – ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಅನ್ನು ಸರ್ಕಾರವೇ ಖರೀದಿಸಬೇಕು. – ಡಾ. ಸ್ವಾಮಿನಾಥನ್ ಆಯೋಗದ ವರದಿ ಹಾಗೂ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು.