ಪಾಕ್ ಮೂಲದ ಉಗ್ರರೊಂದಿಗೆ ನಂಟಿನ ಶಂಕೆ – ಕಲಬುರಗಿಯಲ್ಲಿ ಬಂಗಾಳ ಮೂಲದ ಶಂಕಿತ ವಶಕ್ಕೆ
– ಲಷ್ಕರ್ ಸಂಘಟನೆಯೊಂದಿಗೆ ಪ್ರಮುಖ ಮಾಹಿತಿಗಳ ಹಂಚಿಕೆ ಶಂಕೆ – ಗುಪ್ತಚರ ಇಲಾಖೆ, ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ಕಲಬುರಗಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾದೊಂದಿಗೆ (LeT) ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬನನ್ನ ಕಲಬುರಗಿಯಲ್ಲಿ (Kalaburagi) ವಶಕ್ಕೆ ಪಡೆಯಲಾಗಿದೆ. ಕೇಂದ್ರೀಯ ಗುಪ್ತಚರ ಇಲಾಖೆ ಹಾಗ

– ಲಷ್ಕರ್ ಸಂಘಟನೆಯೊಂದಿಗೆ ಪ್ರಮುಖ ಮಾಹಿತಿಗಳ ಹಂಚಿಕೆ ಶಂಕೆ – ಗುಪ್ತಚರ ಇಲಾಖೆ, ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ಕಲಬುರಗಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾದೊಂದಿಗೆ (LeT) ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬನನ್ನ ಕಲಬುರಗಿಯಲ್ಲಿ (Kalaburagi) ವಶಕ್ಕೆ ಪಡೆಯಲಾಗಿದೆ. ಕೇಂದ್ರೀಯ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತನನ್ನ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದಿರುವ ಶಂಕಿತನನ್ನ ಪಶ್ಚಿಮ ಬಂಗಾಳದ ಮಮ್ತಾಜ್ ವುಲ್ ಮಲೀಕ್ ಎಂದು ಗುರುತಿಸಲಾಗಿದೆ. ಈತ ತನ್ನ ಸಹೋದರನೊಂದಿಗೆ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸೋಷಿಯಲ್ ಮೀಡಿಯಾ ಮೂಲಕ ಲಷ್ಕರ್-ಎ-ತಯ್ಯಬಾ ಸಂಘಟನೆಯ ಖಾತೆಯೊಂದಿಗೆ ಸಂಪರ್ಕ ಹೊಂದಿದ್ದ. ಶಂಕಿತ ವ್ಯಕ್ತಿ ಸಾಮಾಜಿಕ ಜಾಲತಾಣಗಳ ಮೂಲಕ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ಸಂದೇಶಗಳ ಮೂಲಕ ಹಲವು ಮಹತ್ವದ ಮಾಹಿತಿಗಳನ್ನ ಮೆಸೇಜ್ ಮೂಲಕ ಹಂಚಿಕೊಂಡಿದ್ದ. ಈ ಕುರಿತು ಕೇಂದ್ರೀಯ ಗುಪ್ತಚರ ಇಲಾಖೆಗೆ ಸುಳಿವು ಲಭಿಸಿದ್ದು, ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಆತನನ್ನ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಶಂಕಿತನ ಸಂಪರ್ಕಗಳು ಹಾಗೂ ಸಂದೇಶಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಕೆಲ ದಿನಗಳ ಹಿಂದಷ್ಟೇ ಕಲಬುರಗಿ ನಗರದ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ವಶಕ್ಕೆ ಪಡೆದಿರುವುದು ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.