ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ – ಕಠಿಣ ಕ್ರಮಕ್ಕೆ ಸೂಚಿಸಿದ ಸಿಎಂ ಫಡ್ನವೀಸ್
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Maharashtra CM Devendra Fadnavis) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅ.18ರಂದು ಮುಂಬೈನ (Mumbai) ಜುಹು (Juhu) ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Maharashtra CM Devendra Fadnavis) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅ.18ರಂದು ಮುಂಬೈನ (Mumbai) ಜುಹು (Juhu) ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರನ್ನು ಗುರಿಯಾಗಿಸಿ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಸಿಎಂ ದೇವೇಂದ್ರ ಫಡ್ನವೀಸ್ ಅವರು ಮುಂಬೈ ಪೊಲೀಸ್ (Mumbai Police) ಕಮಿಷನರ್ ಜೊತೆ ಮಾತನಾಡಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್, ಓರ್ವ ವಶಕ್ಕೆ ಇದಕ್ಕೂ ಮುನ್ನ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಟೈಗರ್ ಶ್ರಾಫ್ ಮತ್ತು ಅವರ ತಂದೆ ಜಾಕಿ ಶ್ರಾಫ್ ಅವರನ್ನು ಭೇಟಿ ಮಾಡಿ, ಧೈರ್ಯ ತುಂಬಿದ್ದಾರೆ. ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಮತ್ತು ಅವರನ್ನು ಅರೆಸ್ಟ್ ಮಾಡಿ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಭಯಪಡಬೇಡಿ, ಸರ್ಕಾರ ನಿಮ್ಮ ಜೊತೆಗಿದೆ. ಎಲ್ಲಾ ಸೆಲೆಬ್ರಿಟಿಗಳ ಭದ್ರತಾ ವ್ಯವಸ್ಥೆಯನ್ನು ನಾವು ಪರಿಶೀಲಿಸುತ್ತೇವೆ ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ಟೈಗರ್ ಶ್ರಾಫ್ ಅವರ ವಾಹನವನ್ನು ಗುರಿಯಾಗಿಸಿ, ಈ ದಾಳಿ ನಡೆಸಲಾಗಿದೆ. ಈ ಘಟನೆಯು ಅತ್ಯಂತ ಕಳವಳಕಾರಿ ಮತ್ತು ಖಂಡನೀಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಂಬೈ ಪೊಲೀಸ್ ಕಮಿಷನರ್ ಆರೋಪಿಗಳ ಪತ್ತೆಗಾಗಿ ತಂಡಗಳನ್ನು ರಚಿಸಿದ್ದಾರೆ. ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್ನ ಅನಿಲ್ ಪಂಡಿತ್ ಆಗಿದ್ದೇನು? ಪ್ರಾಥಮಿಕ ಮಾಹಿತಿಯ ಪ್ರಕಾರ, ಅ.18ರಂದು ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ತಮ್ಮ ಕಾರಿನಲ್ಲಿ ಹೊರಟಿದ್ದರು. ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಗುರಿಯಾಗಿಸಿ ಮೂವರು ದುಷ್ಕರ್ಮಿಗಳು ಏಳು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಅದೃಷ್ಟವಶಾತ್ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ವೈರಲ್ ಆಗಿರುವ ಪೋಸ್ಟ್ ಒಂದರ ಪ್ರಕಾರ, ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆಯಾದರೂ, ಪೊಲೀಸರು ಇನ್ನೂ ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಘಟನೆಯ ನಂತರ ಅಪರಾಧಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣದ ತನಿಖೆಗಾಗಿ 15 ವಿಶೇಷ ತಂಡಗಳನ್ನು ರಚಿಸಲಾಗಿದೆ.ಇದನ್ನೂ ಓದಿ: ಗುಂಡಿನ ದಾಳಿ ಬಳಿಕ ಟೈಗರ್ ಶ್ರಾಫ್ ಫಸ್ಟ್ ಫೋಟೊ ಔಟ್ – ತಪ್ಪಿತಸ್ಥರನ್ನು ಬಿಡೋದಿಲ್ಲ ಎಂದ ಡಿಸಿಎಂ ಶಿಂಧೆ