ವಿಡಿಯೊ: 2028ಕ್ಕೆ ಸಿ.ಎಂ. ಆಗ್ತಾರಾ ಕುಮಾರಸ್ವಾಮಿ ?
ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೆ ಸಕ್ರಿಯರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದಿಂದ ಹಿಡಿದು ಕೆಪಿಎಸ್ಸಿ, ನೈಸ್ ಯೋಜನೆ ಮತ್ತು ಬಿಡದಿ ಟೌನ್ಶಿಪ್ವರೆಗೆ ಹಲವು ವಿಚಾರಗಳಲ್ಲಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರದ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೆ ಸಕ್ರಿಯರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದಿಂದ ಹಿಡಿದು ಕೆಪಿಎಸ್ಸಿ, ನೈಸ್ ಯೋಜನೆ ಮತ್ತು ಬಿಡದಿ ಟೌನ್ಶಿಪ್ವರೆಗೆ ಹಲವು ವಿಚಾರಗಳಲ್ಲಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಇನ್ನೊಂದೆಡೆ, 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಕುಮಾರಸ್ವಾಮಿ ಅವರ ಹೆಚ್ಚುತ್ತಿರುವ ರಾಜಕೀಯ ಚಟುವಟಿಕೆಗಳ ಉದ್ದೇಶವೇನು? ಸಿದ್ದರಾಮಯ್ಯ–ಡಿಕೆ ಶಿವಕುಮಾರ್ ನಡುವಿನ ರಾಜಕೀಯ ಬೆಳವಣಿಗೆಗಳನ್ನು ಅವರು ಹೇಗೆ ಬಳಸಿಕೊಳ್ಳುತ್ತಿದ್ದಾರೆ? 2028ರ ಮುಖ್ಯಮಂತ್ರಿ ಸ್ಥಾನದ ಕುರಿತು ಅವರ ಹೇಳಿಕೆಗಳ ರಾಜಕೀಯ ಮಹತ್ವವೇನು? ಈ ಎಲ್ಲ ಪ್ರಶ್ನೆಗಳ ಕುರಿತ ವಿಶ್ಲೇಷಣೆ ಈ ವಿಡಿಯೊದಲ್ಲಿ.