VIDEO|ಕಬ್ಬು ಬೆಳೆಗಾರರ ಬೇಡಿಕೆ ಈಡೇರುತ್ತಾ?; ನ.27ರಿಂದ ಮತ್ತೆ ಹೋರಾಟದ ಎಚ್ಚರಿಕೆ
ಸಕ್ಕರೆ ಹಂಗಾಮು ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟವೂ ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ₹31ರಿಂದ ₹60ಕ್ಕೆ ಹೆಚ್ಚಿಸಬೇಕು ಹಾಗೂ ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಸಂಪೂರ್ಣ ಖರೀದಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆ. ಬೆಳಗಾವಿ, ಕಿತ್ತೂರು, ಹಾ

ಸಕ್ಕರೆ ಹಂಗಾಮು ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟವೂ ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ₹31ರಿಂದ ₹60ಕ್ಕೆ ಹೆಚ್ಚಿಸಬೇಕು ಹಾಗೂ ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಸಂಪೂರ್ಣ ಖರೀದಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆ. ಬೆಳಗಾವಿ, ಕಿತ್ತೂರು, ಹಾವೇರಿ, ಕಲಬುರಗಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಸುಮಾರು 200 ಕಿ.ಮೀ ಪಾದಯಾತ್ರೆ ನಡೆಸಿ ‘ಹುಬ್ಬಳ್ಳಿ ಚಲೊ’ ಹೋರಾಟದ ಮೂಲಕ ಸರ್ಕಾರಗಳ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಗೂ ಮಣಿಯದ ರೈತರು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭರವಸೆಯ ಬಳಿಕ ನವೆಂಬರ್ 26ರವರೆಗೆ ಗಡುವು ನೀಡಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ನವೆಂಬರ್ 27ರಿಂದ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆ, ಪ್ರಮುಖ ಬೇಡಿಕೆಗಳು, ಸಕ್ಕರೆ ಮತ್ತು ಎಥೆನಾಲ್ ಉದ್ಯಮದ ಸಂಕಷ್ಟ ಹಾಗೂ ಕೇಂದ್ರ–ರಾಜ್ಯ ಸರ್ಕಾರಗಳ ಮುಂದಿರುವ ಸವಾಲುಗಳ ಸಂಪೂರ್ಣ ಚಿತ್ರಣ ಈ ವಿಡಿಯೊದಲ್ಲಿ.