ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್
– 2 ಟ್ರಾಲಿ ಬ್ಯಾಗ್ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ಸಾಗಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ ಬೆಂಗಳೂರು: ಉಪ್ಪಾರಪೇಟೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು (CCB Police) ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು (Fake Cigarettes) ಸೀಜ್ ಮಾಡಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 2

– 2 ಟ್ರಾಲಿ ಬ್ಯಾಗ್ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ಸಾಗಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ ಬೆಂಗಳೂರು: ಉಪ್ಪಾರಪೇಟೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು (CCB Police) ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು (Fake Cigarettes) ಸೀಜ್ ಮಾಡಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 2 ಟ್ರಾಲಿ ಬ್ಯಾಗ್ಗಳಲ್ಲಿ ನಕಲಿ ಸಿಗರೇಟ್ಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದರು. ಕೇರಳಕ್ಕೆ ಸಾಗಾಟದ ವೇಳೆ ಸಿಸಿಬಿ ಪೊಲೀಸರು ನೇರವಾಗಿ ಆರೋಪಿಗಳ ಮೇಲೆ ದಾಳಿ ಮಾಡಿ ಮಹಮದ್ ರಿಯಾಝ್ ಹಾಗೂ ಕುಮಾರನ್ ಎಂಬವರನ್ನ ವಶಕ್ಕೆ ಪಡೆದು 20 ಲಕ್ಷ ಮೌಲ್ಯದ ಸಿಗರೇಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹೆಚ್ಡಿಕೆಗೆ Thumbs Up ಮೂಲಕ ಡಿಕೆಶಿ ತಿರುಗೇಟು – ಮೈಸೂರು ದಸರಾ 100 ರೀಲ್ಸ್ಗೆ ಬಹುಮಾನ ಮತ್ತೊಂದು ಪ್ರಕರಣದಲ್ಲಿ ಉಪ್ಪಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ 10 ಲಕ್ಷ ಮೌಲ್ಯದ ಸಿಗರೇಟ್ಗಳನ್ನು ಸೀಜ್ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಮಹಮದ್ ಗುಲ್ಜಾರ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಬಂಧಿಸಿದ್ದು, ಒಟ್ಟು 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಮನೆಗೆ ನೀರು ಕೊಡಲು ಇಡೀ ರಸ್ತೆಯನ್ನೇ ಅಗೆದ ನಗರಸಭೆ ಸಿಬ್ಬಂದಿ!