ತೊಗರಿ ಹೊಲದಲ್ಲಿ ಗಾಂಜಾ ಬೆಳೆದ ರೈತ, ₹1.1 ಕೋಟಿ ಮೌಲ್ಯದ ಗಾಂಜಾ ವಶ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ದಿಂಡವಾರ ಗ್ರಾಮದ ಶಿವಶಂಕರ ಜೀರಾ (56) ಎಂಬಾತ ತನ್ನ ಹೊಲದಲ್ಲಿ ತೊಗರಿ ಬೆಳೆ ನಡುವೆ ಅಕ್ರಮವಾಗಿ ಬೆಳೆದಿದ್ದ 500ಕ್ಕೂ ಅಧಿಕ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಆರೋಪಿಯ ಹೊಲದಿಂದ ವಶಪಡಿಸಿಕೊಂಡಿರುವ ಗಾಂಜಾ ಗಿಡಗಳ ಒಟ್ಟು ತೂಕ 202 ಕೆ.ಜಿ. 755 ಗ್ರಾಂ ಇದ್ದು, ಇದರ ಒಟ್ಟು ಮೌಲ್ಯ ₹1.1 ಕೋಟಿಯಾಗಿದೆ. ಆರೋಪಿಯನ್

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ದಿಂಡವಾರ ಗ್ರಾಮದ ಶಿವಶಂಕರ ಜೀರಾ (56) ಎಂಬಾತ ತನ್ನ ಹೊಲದಲ್ಲಿ ತೊಗರಿ ಬೆಳೆ ನಡುವೆ ಅಕ್ರಮವಾಗಿ ಬೆಳೆದಿದ್ದ 500ಕ್ಕೂ ಅಧಿಕ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಆರೋಪಿಯ ಹೊಲದಿಂದ ವಶಪಡಿಸಿಕೊಂಡಿರುವ ಗಾಂಜಾ ಗಿಡಗಳ ಒಟ್ಟು ತೂಕ 202 ಕೆ.ಜಿ. 755 ಗ್ರಾಂ ಇದ್ದು, ಇದರ ಒಟ್ಟು ಮೌಲ್ಯ ₹1.1 ಕೋಟಿಯಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಅಕ್ರಮ ಗಾಂಜಾ ಬೆಳೆ ಕುರಿತಂತೆ ಮಾಹಿತಿ ಸಂಗ್ರಹಿಸಿ, ದಾಳಿ ಕೈಗೊಂಡು ಉತ್ತಮ ಕರ್ತವ್ಯ ನಿರ್ವಹಿಸಿದ ಬಸವನ ಬಾಗೇವಾಡಿ ಉಪವಿಭಾಗದ ಡಿಎಸ್ಪಿ ಚಂದ್ರಕಾಂತ ನಂದರೆಡ್ಡಿ, ಪೊಲೀಸ್ ಇನ್ಸ್ಪೆಕ್ಟರ್ ಗುರುಶಾಂತ ದಾಶ್ಯಾಳ ಹಾಗೂ ದಾಳಿಯಲ್ಲಿ ಪಾಲ್ಗೊಂಡ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿಯ ಕರ್ತವ್ಯವನ್ನು ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.57 ಪ್ರಕರಣ ದಾಖಲು: ವಿಜಯಪುರ ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯ ಬಗ್ಗೆ ‘ಆಪರೇಷನ್ ರೈಜ್’ ಹಾಗೂ ‘ಬೇಡ ಬ್ರೋ’ ಅಭಿಯಾನ ಸೇರಿದಂತೆ ವಿಶೇಷ ಕಾರ್ಯಾಚರಣೆ ಕೈಕೊಂಡು 2026 ನೇ ಸಾಲಿನಲ್ಲಿ 57 ಪ್ರಕರಣಗಳನ್ನು ದಾಖಲಿಸಿಕೊಂಡು 65 ಆರೋಪಿಗಳನ್ನು ಬಂಧಿಸಿ, 342 ಕೆ.ಜಿ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ₹1.30 ಕೋಟಿಯಾಗಿದೆ ಎಂದು ತಿಳಿಸಿದರು.ಮಾದಕ ದ್ರವ್ಯಗಳ ತಯಾರಿಕೆ, ಮಾರಾಟ ಹಾಗೂ ಬಳಕೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ತಿಳಿಸಬೇಕು. ಸಾರ್ವಜನಿಕರು ಮಾಹಿತಿ ನೀಡಿ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಮಾರಾಟ ಹಾಗೂ ಬಳಕೆ ಬಗ್ಗೆ ವಿಶೇಷ ನಿಗಾವಹಿಸಿದ್ದು, ಮಾದಕ ದ್ರವ್ಯಗಳ ತಯಾರಿಕೆ, ಮಾರಾಟ ಹಾಗೂ ಬಳಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಕೊಳ್ಳಲಾಗಿದೆಲಕ್ಷ್ಮಣ ನಿಂಬರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ261019-26-1925038751