ಬರ ನಿರ್ವಹಣೆ ವೈಫಲ್ಯ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಮೇಶ ಜಿಗಜಿಣಗಿ ತಿರುಗೇಟು
ವಿಜಯಪುರ: ‘ಬರ ಪರಿಸ್ಥಿತಿ ನಿರ್ವಹಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಕುಣಿಯಲು ಬಾರದವರು ನೆಲ ಡೊಂಕು ಎಂಬಂತಾಗಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಸಚಿವ ಎಂ.ಬಿ.ಪಾಟೀಲರಿಗೆ ತಿರುಗೇಟು ನೀಡಿದ್ದಾರೆ.ಕೇಂದ್ರದಿಂದ ಹೆಚ್ಚಿನ ಪರಿಹಾರ ತರುವ ನಿಟ್ಟಿನಲ್ಲಿ ಸಂಸದರು ಪ್ರಯತ್ನಿಸಬೇಕೆಂಬ ಸಚಿವ ಎಂ.ಬಿ. ಪಾಟೀಲರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.ರಾಜ್ಯ ಸರ್ಕಾರ ಪ್ರತ

ವಿಜಯಪುರ: ‘ಬರ ಪರಿಸ್ಥಿತಿ ನಿರ್ವಹಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಕುಣಿಯಲು ಬಾರದವರು ನೆಲ ಡೊಂಕು ಎಂಬಂತಾಗಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಸಚಿವ ಎಂ.ಬಿ.ಪಾಟೀಲರಿಗೆ ತಿರುಗೇಟು ನೀಡಿದ್ದಾರೆ.ಕೇಂದ್ರದಿಂದ ಹೆಚ್ಚಿನ ಪರಿಹಾರ ತರುವ ನಿಟ್ಟಿನಲ್ಲಿ ಸಂಸದರು ಪ್ರಯತ್ನಿಸಬೇಕೆಂಬ ಸಚಿವ ಎಂ.ಬಿ. ಪಾಟೀಲರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದನ್ನು ನಿಲ್ಲಿಸಲಿ. ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದರೂ ಕುಂಭಕರ್ಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಕೇವಲ ₹2,500 ಘೋಷಿಸುವ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯವನ್ನು ಜನರ ಮುಂದಿರಿಸಿದೆ. ಅತಿವೃಷ್ಠಿಯಾಗಲಿ, ಅನಾವೃಷ್ಠಿಯಾಗಲಿ ಕೇಂದ್ರವೇ ಪರಿಹಾರ ನೀಡಬೇಕೆಂದಾದರೆ ರಾಜ್ಯದಲ್ಲಿ ಸರ್ಕಾರ ಇರುವುದಾದರೂ ಏತಕ್ಕೆ? ಜನಪರ ಆಡಳಿತ ನೀಡುವಲ್ಲಿ ತಮ್ಮ ಪಾತ್ರವೇನು? ತಮ್ಮಿಂದ ಸುಗಮ, ಜನಪರ ಆಡಳಿತ ನೀಡಲಾಗುತ್ತಿಲ್ಲವೆಂದಾದರೆ ಅಧಿಕಾರದಲ್ಲಿ ಮುಂದುವರಿಯುವುದಾದರೂ ಏಕೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.ರಾಜ್ಯದಲ್ಲಿ ಜನ ಕಾಂಗ್ರೆಸ್ಗೆ ಛೀಮಾರಿ ಹಾಕುತ್ತಿದ್ದಾರೆ. ಬರದ ತೀವ್ರತೆಗೆ ಅನುಗುಣವಾಗಿ ರೈತರಿಗೆ ಸಮರ್ಪಕ ಪರಿಹಾರ ಒದಗಿಸುವುದು ಮತ್ತು ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಭೀಕರ ಬರದಲ್ಲೂ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ಅನಧಿಕೃತವಾಗಿ ನೀರು ಹರಿಸಲಾಗುತ್ತಿದೆ. ಸಕಾಲಕ್ಕೆ ಕೆಡಿಪಿ ಸಭೆಗಳನ್ನು ಕರೆದು ಬರದ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ಸಚಿವರುಗಳು ವಿದೇಶಿ ಪ್ರವಾಸದಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಜಿಗಜಿಣಗಿ ಟೀಕಿಸಿದರು.ಕಬ್ಬು ಬೆಳೆಗಾರರ ಸಮಸ್ಯೆ ಕೇವಲ ಕರ್ನಾಟಕ ರಾಜ್ಯದಲ್ಲಷ್ಟೇ ಅಲ್ಲ ಇಡೀ ದೇಶದ ರೈತರ ಸಮಸ್ಯೆಯಾಗಿದೆ. ಹೀಗಾಗಿ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಸಮಿತಿ ರಚಿಸಿದೆ. ಈ ಕುರಿತು ಕೇಂದ್ರದ ನಾಯಕರೊಂದಿಗೆ ರಾಜ್ಯದ ಸಂಸದರು ನಿರಂತರ ಸಂಪರ್ಕದಲ್ಲಿದ್ದಾರೆ. ಆದರೆ, ರಾಜ್ಯ ಸರ್ಕಾರ ಏನು ಮಾಡುತ್ತಿದೆ? ತಮ್ಮ ಪಾತ್ರವೇನು? ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರ್ಕಾರದ ಹೊಣೆಗಾರಿಕೆ ಇಲ್ಲವೇ? ಇದರಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ಸಿಗರ ಬೂಟಾಟಿಕೆಯನ್ನು ಜನ ಗಮನಿಸುತ್ತಿದ್ದಾರೆಂದು ಜಿಗಜಿಣಗಿ ಹರಿಹಾಯ್ದಿದ್ದಾರೆ.261020-26-1327843984