ಪದವೀಧರರ ಕ್ಷೇತ್ರ; ಮುಂದುವರಿದ ಪ್ರಚಾರ
ಹಾವೇರಿ: ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಪ್ರಚಾರ ಮುಂದುವರಿದಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ಪ್ರಚಾರ ಮಾಡಿದರು.ಶಾಸಕ ಎಚ್.ಕೆ. ಪಾಟೀಲ ಅವರು ಹಾವೇರಿಯ ಹಲವು ಕಡೆಗಳಲ್ಲಿ ಜರುಗಿದ ಸಭೆಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರು

ಹಾವೇರಿ: ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಪ್ರಚಾರ ಮುಂದುವರಿದಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ಪ್ರಚಾರ ಮಾಡಿದರು.ಶಾಸಕ ಎಚ್.ಕೆ. ಪಾಟೀಲ ಅವರು ಹಾವೇರಿಯ ಹಲವು ಕಡೆಗಳಲ್ಲಿ ಜರುಗಿದ ಸಭೆಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು, ಬೂತ್ ಮಟ್ಟದಿಂದಲೇ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕೆಂದು ಹೇಳಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಅವರು ಹಾವೇರಿ ನಗರದ ಹಲವು ಕಡೆಗಳಲ್ಲಿ ನೌಕರರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಮತಯಾಚಿಸಿದರು.ಬಿಜೆಪಿಯ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಪರವಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಇತರರು, ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಸೇರಿ ಹಲವು ಗ್ರಾಮಗಳಲ್ಲಿ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ ಅವರು ಸಂಕನೂರ ಪರ ಪ್ರಚಾರ ಮಾಡಿದರು.ಶಾಸಕ ಯಾಸೀರ ಅಹ್ಮದಖಾನ ಪಠಾಣ ಅವರು ಶಿಗ್ಗಾವಿ ಹಾಗೂ ಸವಣೂರಿನ ನ್ಯಾಯಾಲಯಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದರು.ಪಕ್ಷೇತರ ಅಭ್ಯರ್ಥಿ ಕಾಂತಕುಮಾರ ಆರ್. ಅವರ ಪರವಾಗಿ ಹಾನಗಲ್ನಲ್ಲಿ ಪ್ರಚಾರ ನಡೆಸಲಾಯಿತು. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ ಆರ್. ಅವರಿಗೆ ಮತ ನೀಡುವಂತೆ ಬೆಂಬಲಿಗರು ಮತಯಾಚಿಸಿದರು.ಗುತ್ತಲದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ನಿಂದ ಚುನಾವಣಾ ಪೂರ್ವಭಾವಿ ಸಭೆ ಜರುಗಿತು. ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಸಭೆ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ತಮ್ಮ ಪಕ್ಷದ ಅಭ್ಯರ್ಥಿ ಪರ ಚುರುಕಿನ ಪ್ರಚಾರ ನಡೆಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.261020-22-1659278676