ಜಂಬೂಸವಾರಿ: ಸಿದ್ಧತೆ ಪರಿಶೀಲಿಸಿದ ಯತೀಂದ್ರ
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಜಂಬೂಸವಾರಿಗೆ ಮಾಡಿಕೊಳ್ಳಲಾಗಿರುವ ಸಿದ್ಧತೆಗಳನ್ನು ಮಂಗಳವಾರ ಸಂಜೆ ವೀಕ್ಷಿಸಿದರು.ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ 'ಜಂಬೂಸವಾರಿ' ಬುಧವಾರ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. ಮೆರವಣಿಗೆಗಾಗಿ ಅಂಬಾವಿಲಾಸ ಅರಮನೆಯ ಆವರಣದಲ್ಲಿ ಮಾಡಿರುವ ಆಸನಗಳ ವ್ಯವಸ್ಥೆ, ಬ್ಯಾರಿಕೇಡ್ ಅಳವಡಿಕೆ ಹಾ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಜಂಬೂಸವಾರಿಗೆ ಮಾಡಿಕೊಳ್ಳಲಾಗಿರುವ ಸಿದ್ಧತೆಗಳನ್ನು ಮಂಗಳವಾರ ಸಂಜೆ ವೀಕ್ಷಿಸಿದರು.ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ 'ಜಂಬೂಸವಾರಿ' ಬುಧವಾರ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. ಮೆರವಣಿಗೆಗಾಗಿ ಅಂಬಾವಿಲಾಸ ಅರಮನೆಯ ಆವರಣದಲ್ಲಿ ಮಾಡಿರುವ ಆಸನಗಳ ವ್ಯವಸ್ಥೆ, ಬ್ಯಾರಿಕೇಡ್ ಅಳವಡಿಕೆ ಹಾಗೂ ಗಣ್ಯರ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ವೀಕ್ಷಿಸಿದರು.ಸಾರ್ವಜನಿಕರು ಮತ್ತು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ, ಎಲ್ಲಾ ವ್ಯವಸ್ಥೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಸುರಕ್ಷಿತವಾಗಿ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಜೊತೆಗಿದ್ದರು.
Read the complete story at Prajavani