ಸ್ಟಿಂಗ್ ಆಪರೇಷನ್ ಪ್ರಕರಣ ಸಿಬಿಐಗೆ ವಹಿಸಿ – ಬಸವರಾಜ ಹೊರಟ್ಟಿ ಆಗ್ರಹ
ಹುಬ್ಬಳ್ಳಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ (Basavaraj Horatti) ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೂಡ ಸ್ಟಿಂಗ್ ಆಪರೇಷನ್ಗ

ಹುಬ್ಬಳ್ಳಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ (Basavaraj Horatti) ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೂಡ ಸ್ಟಿಂಗ್ ಆಪರೇಷನ್ಗಳಂತಹ ಪ್ರಕರಣಗಳು ನಡೆಯುತ್ತಿದ್ದವು. ಆದರೆ, ಅವು ಹೆಚ್ಚು ಬಹಿರಂಗವಾಗುತ್ತಿರಲಿಲ್ಲ. ಈಗ ಬಹಿರಂಗವಾಗಿಯೇ ಇಂತಹ ಘಟನೆಗಳು ನಡೆಯುತ್ತಿರುವುದು ಕಳವಳಕಾರಿ ಎಂದು ಹೇಳಿದರು. ಇದನ್ನೂ ಓದಿ: ಬೇಡಿಕೆ ಈಡೇರಿಕೆಗೆ ನ.26ಕ್ಕೆ ಡೆಡ್ಲೈನ್ ನೀಡಿದ ಕಬ್ಬು ಬೆಳೆಗಾರರು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದ ಕರ್ನಾಟಕ, ಇದೀಗ ಸ್ಟಿಂಗ್ ಆಪರೇಷನ್ ಪ್ರಕರಣದಿಂದಾಗಿ ದೇಶದಾದ್ಯಂತ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ ಇಂದಿನ ರಾಜಕಾರಣ ಹಿಂದಿನಂತಿಲ್ಲ. ರಾಜಕೀಯದಲ್ಲಿ ತತ್ವ ಮತ್ತು ಆದರ್ಶಗಳು ಮಾಯವಾಗುತ್ತಿವೆ ಎಂದು ಅಭಿಪ್ರಾಯಪಟ್ಟ ಅವರು, ಹಿಂದೆ ರಾಮಕೃಷ್ಣ ಹೆಗಡೆ ಅವರ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಾಗ ಅವರು ರಾಜೀನಾಮೆ ನೀಡಿದ್ದರು ಎಂದು ಸ್ಮರಿಸಿದರು. ಇದನ್ನೂ ಓದಿ: ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್ – ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯನ ಭವಿಷ್ಯ ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ ಹೊರಟ್ಟಿ, ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ಸತ್ಯಾಂಶ ಹೊರಬರಲಿದೆ. ಹೀಗಾಗಿ, ರಾಜ್ಯ ಸರ್ಕಾರ ತಕ್ಷಣವೇ ಸಿಬಿಐ ತನಿಖೆಗೆ ವಹಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: KPSC ಅಧಿಕೃತ ವೆಬ್ಸೈಟ್ ವಿಳಾಸ ಬದಲಾವಣೆ – ಹೊಸ ಪೋರ್ಟಲ್ ಆರಂಭಿಸಿದ ಲೋಕಸೇವಾ ಆಯೋಗ ಇದೇ ವೇಳೆ, ನೀರು ಮತ್ತು ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಧಾವಿಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಆಯುಧ ಪೂಜೆ | ಗಗನಕ್ಕೇರಿದ ಹೂವು, ಹಣ್ಣು ಬೆಲೆ – ಖರೀದಿಗೆ ಮುಗಿಬಿದ್ದ ಜನ