ನಾಗೇಂದ್ರನಾಥ್ಗೆ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ
ಚಿಕ್ಕಬಳ್ಳಾಪುರ: ಜನಪದ ಕಲೆ, ಕನ್ನಡ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಜಿಲ್ಲೆಯ ಕಲಾವಿದ ಸೋ.ಸು. ನಾಗೇಂದ್ರನಾಥ್ ಅವರು ಕರ್ನಾಟಕ ಜಾನಪದ ಅಕಾಡೆಮಿಯ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಜಾನಪದ ಗಾಯನ ಕ್ಷೇತ್ರದಲ್ಲಿನ ಅವರ ಸೇವೆ ಪರಿಗಣಿಸಿ ಅಕಾಡೆಮಿ ಈ ಗೌರವ ನೀಡಿದೆ. ಪ್ರಶಸ್ತಿಯು ₹25 ಸಾವಿರ ನಗದು ಬಹುಮಾನ ಒಳಗ

ಚಿಕ್ಕಬಳ್ಳಾಪುರ: ಜನಪದ ಕಲೆ, ಕನ್ನಡ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಜಿಲ್ಲೆಯ ಕಲಾವಿದ ಸೋ.ಸು. ನಾಗೇಂದ್ರನಾಥ್ ಅವರು ಕರ್ನಾಟಕ ಜಾನಪದ ಅಕಾಡೆಮಿಯ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಜಾನಪದ ಗಾಯನ ಕ್ಷೇತ್ರದಲ್ಲಿನ ಅವರ ಸೇವೆ ಪರಿಗಣಿಸಿ ಅಕಾಡೆಮಿ ಈ ಗೌರವ ನೀಡಿದೆ. ಪ್ರಶಸ್ತಿಯು ₹25 ಸಾವಿರ ನಗದು ಬಹುಮಾನ ಒಳಗೊಂಡಿದೆ.ಗ್ರಾಮೀಣ ಪರಿಸರದಲ್ಲಿ ಬೆಳೆದ ನಾಗೇಂದ್ರನಾಥ್ ಬಾಲ್ಯದಿಂದಲೇ ಕಲೆ ಮತ್ತು ಸಮಾಜಮುಖಿ ಸೇವೆಯಲ್ಲಿ ಆಸಕ್ತಿ ಬೆಳೆಸಿಕೊಂಡರು. ಕಳೆದ ಹಲವು ವರ್ಷಗಳಿಂದ ಜನಪದ ಕಲೆ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿವು ಹಾಗೂ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವಿಶೇಷವಾಗಿ ಯುವಜನರು ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಜನಪದದ ಬಗ್ಗೆ ಆಸಕ್ತಿ ಮೂಡಿಸಲು ಗಾಯನ, ನಟನೆ, ನೃತ್ಯ, ನಾಟಕ, ರೂಪಕ, ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲಾ ಉತ್ಸವ, ನಂದಿ ಉತ್ಸವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನಪದ ಕಲಾ ಪ್ರದರ್ಶನಗಳನ್ನು ನೀಡಿದ್ದಾರೆ. ಯುವಜನ ಮೇಳ, ಯುವಜನೋತ್ಸವ ಹಾಗೂ ರಾಷ್ಟ್ರೀಯ ಮಟ್ಟದ ಜನಪದ ಭಾವೈಕ್ಯತಾ ಕಾರ್ಯಕ್ರಮಗಳಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. ತಮಿಳುನಾಡಿನ ತಂಜಾವೂರು ಹಾಗೂ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡು ಜನಪದ ಕಲಾ ಪ್ರದರ್ಶನದ ಮೂಲಕ ಮೆಚ್ಚುಗೆ ಗಳಿಸಿದ್ದಾರೆ.ಸ್ವಾಮಿ ವಿವೇಕಾನಂದ ಕಲಾ ಬಳಗ ಮತ್ತು ಕಲಾ ಕೇಂದ್ರದ ಮೂಲಕ ಗ್ರಾಮೀಣ ಯುವಜನರು ಹಾಗೂ ವಿದ್ಯಾರ್ಥಿಗಳಿಗೆ ಜನಪದ ಕಲಾ ಸ್ಪರ್ಧೆ, ಗ್ರಾಮೀಣ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಪ್ರೋತ್ಸಾಹಿಸುತ್ತಿದ್ದಾರೆ.ಪರಿಸರ ಸಂರಕ್ಷಣೆ, ಸಾಕ್ಷರತೆ, ರಾಷ್ಟ್ರೀಯ ಭಾವೈಕ್ಯತೆ, ದುಶ್ಚಟಗಳ ನಿರ್ಮೂಲನೆ ಹಾಗೂ ಆರೋಗ್ಯ ಜಾಗೃತಿಯಂತಹ ಸಾಮಾಜಿಕ ಉದ್ದೇಶಗಳಿಗಾಗಿ ಬೀದಿನಾಟಕ, ರೂಪಕ ಮತ್ತು ಶ್ರಮದಾನ ಶಿಬಿರಗಳನ್ನು ನಡೆಸಿದ್ದಾರೆ.ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ನಾಗೇಂದ್ರನಾಥ್ ಅವರು ಪತ್ರಕರ್ತ, ನಿರೂಪಕ, ರಂಗಭೂಮಿ ಕಲಾವಿದ ಹಾಗೂ ಕಿರುತೆರೆ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದಾರೆ.ಇವರ ಸಾಧನೆಗೆ ಬಯಲುಸೀಮೆ ಜಾನಪದ ಪ್ರಶಸ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕಲಾ ಪ್ರಶಸ್ತಿ, ಭರಣಿ ರಂಗ ಪುರಸ್ಕಾರ, ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಹಾಗೂ ನೆಹರು ಯುವ ಕೇಂದ್ರದ ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.ಜನಪದ ಕಲೆಯ ಪ್ರಸಾರ, ಕನ್ನಡದ ಸೇವೆ ಮತ್ತು ಗ್ರಾಮೀಣ ಯುವಜನರಲ್ಲಿ ಸಾಂಸ್ಕೃತಿಕ ಅರಿವು ಮೂಡಿಸುವ ಕಾರ್ಯಕ್ಕೆ ದೊರೆತಿರುವ ಈ ಗೌರವ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.24 ವರ್ಷಗಳಿಂದ ಕನ್ನಡದ ಸೇವೆಜಿಲ್ಲೆಯ ಶಾಲಾ–ಕಾಲೇಜುಗಳು, ಸಂಘ–ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 24 ವರ್ಷಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆ ಪರಿಚಯಿಸುವ ಕಾರ್ಯಕ್ರಮಗಳನ್ನು ಸೋ.ಸು. ನಾಗೇಂದ್ರನಾಥ್ ನಡೆಸಿಕೊಂಡು ಬರುತ್ತಿದ್ದಾರೆ. ಗಡಿ ಭಾಗದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೂ ಜನಪದ ಕಲೆ ತಲುಪಿಸುವ ಪ್ರಯತ್ನ ಮಾಡಿದ್ದಾರೆ. ಯುವಕರನ್ನು ಸಂಘಟಿಸಿ, ಅವರ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದಾರೆ.ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು 10 ನಾಟಕ, 80ಕ್ಕೂ ಹೆಚ್ಚು ಕವನಗಳು ಹಾಗೂ ಐದು ಕಥೆಗಳನ್ನು ರಚಿಸಿದ್ದಾರೆ. ಎರಡು ಕಿರುತೆರೆ ಧಾರಾವಾಹಿಗಳಿಗೆ ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಎಂ.ಫಿಲ್ ಅಧ್ಯಯನದ ವೇಳೆ ‘ಚಿಕ್ಕಬಳ್ಳಾಪುರದ ಐತಿಹಾಸಿಕ ಸ್ಥಳಗಳು’ ಎಂಬ ವಿಷಯದಡಿ ಜಿಲ್ಲೆಯ ಐತಿಹಾಸಿಕ ಪರಂಪರೆ ಮತ್ತು ಜನಪದದ ನಡುವಿನ ಸಂಬಂಧವನ್ನು ಅಧ್ಯಯನ ಮಾಡಿದ್ದಾರೆ. ಜನಪದ ಗೀತೆಗಳು, ಒಗಟುಗಳು ಮತ್ತು ಗಾದೆಗಳನ್ನು ಸಂಗ್ರಹಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.261020-16-1790843228