ಬೆಳಗಾವಿ: ಸಂಭ್ರಮ ಸಡಗರದಿಂದ ನವರಾತ್ರಿ ಉತ್ಸವ ಸಂಪನ್ನ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಸಲ ಸಡಗರದಿಂದ ನಡೆದ ನವರಾತ್ರಿ ಉತ್ಸವ ಮಂಗಳವಾರ ಸಂಪನ್ನಗೊಂಡಿತು.ವಿಜಯದಶಮಿ ಪ್ರಯುಕ್ತ ಇಲ್ಲಿನ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ವೈಭವದ ಸೀಮೋಲ್ಲಂಘನೆ’ ಕಾರ್ಯಕ್ರಮ ನಡೆಯಿತು. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು.ಪಾಟೀಲ ಗಲ್ಲಿಯ ವತನದಾರ್ ಪಾಟೀಲ(ಪೊಲೀಸ್ಪಾಟೀಲ) ಮನೆತನದ ನೇತೃತ್ವದಲ್ಲಿ ಧಾರ್ಮ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಸಲ ಸಡಗರದಿಂದ ನಡೆದ ನವರಾತ್ರಿ ಉತ್ಸವ ಮಂಗಳವಾರ ಸಂಪನ್ನಗೊಂಡಿತು.ವಿಜಯದಶಮಿ ಪ್ರಯುಕ್ತ ಇಲ್ಲಿನ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ವೈಭವದ ಸೀಮೋಲ್ಲಂಘನೆ’ ಕಾರ್ಯಕ್ರಮ ನಡೆಯಿತು. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು.ಪಾಟೀಲ ಗಲ್ಲಿಯ ವತನದಾರ್ ಪಾಟೀಲ(ಪೊಲೀಸ್ಪಾಟೀಲ) ಮನೆತನದ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿದವು. ನಗರದ ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಮೂಲಕ ಆಗಮಿಸಿದ ಪಲ್ಲಕ್ಕಿಗಳು ಮೈದಾನದಲ್ಲಿ ಸಮಾವೇಶಗೊಂಡವು. ಧಾರ್ಮಿಕ ಕಾರ್ಯಕ್ರಮ ಮುಗಿದ ನಂತರ, ಜನರು 'ಬನ್ನಿ' ಲೂಟಿ ಮಾಡಲು ಮುಗಿಬಿದ್ದರು. ನಂತರ ತಮ್ಮ ಮನೆಗಳಿಗೆ ಬನ್ನಿ ತೆಗೆದುಕೊಂಡು ಹೋಗಿ, ಪರಸ್ಪರರು ಹಂಚಿ ಶುಭಾಶಯ ಕೋರಿದರು.ರಂಜೀತ್ ಚವ್ಹಾಣಪಾಟೀಲ, ಮಾಜಿ ಶಾಸಕ ಅನಿಲ ಬೆನಕೆ, ನಗರ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಇತರರಿದ್ದರು.ನಗರದಲ್ಲಿ ಕೆಲವರು ತಮ್ಮ ಮನೆಗಳು, ವ್ಯಾಪಾರಿ ಮಳಿಗೆಗಳು ಹಾಗೂ ಕಚೇರಿಗಳಲ್ಲಿ ಸೋಮವಾರ ಆಯುಧ ಪೂಜೆ ಮಾಡಿದ್ದರು. ಮಂಗಳವಾರ ಇನ್ನೂ ಕೆಲವರು ಆಯುಧಪೂಜೆ ಸಲ್ಲಿಸಿದರು.ಬೆಳಗಾವಿಯ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ಮಂಗಳವಾರ ನಡೆದ ಸೀಮೋಲ್ಲಂಘನೆ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು ಬೆಳಗಾವಿಯ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ಮಂಗಳವಾರ ನಡೆದ ಸೀಮೋಲ್ಲಂಘನೆ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು ಬೆಳಗಾವಿಯ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ಮಂಗಳವಾರ ನಡೆದ ಸೀಮೋಲ್ಲಂಘನೆ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು ಬೆಳಗಾವಿಯ ಕ್ಯಾಂಪ್ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ಮಂಗಳವಾರ ನಡೆದ ಸೀಮೋಲ್ಲಂಘನೆ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು