ಏಕಾಏಕಿ ಕಾಣಿಸಿಕೊಂಡ ಬೆಂಕಿ – ಪೆಟ್ರೋಲ್ ಪಂಪ್ನಲ್ಲಿ ಮಲಗಿದ್ದ ವ್ಯಕ್ತಿ ಸಜೀವ ದಹನ
ಬೀದರ್: ಪೆಟ್ರೋಲ್ ಪಂಪ್ನಲ್ಲಿ ಮಲಗಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಸಜೀವ ದಹನಗೊಂಡಿರುವ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ (Chitaguppa) ತಾಲೂಕಿನ ನಿರ್ಣಾ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಪಂಪ್ನಲ್ಲಿ ಮಲಗಿದ್ದ ಬಾಲಾಜಿ ದಾಸೂರ ಎಂಬುವವರು ಬೆಂಕಿ ಬಲೆಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 9 ಲಕ

ಬೀದರ್: ಪೆಟ್ರೋಲ್ ಪಂಪ್ನಲ್ಲಿ ಮಲಗಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಸಜೀವ ದಹನಗೊಂಡಿರುವ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ (Chitaguppa) ತಾಲೂಕಿನ ನಿರ್ಣಾ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಪಂಪ್ನಲ್ಲಿ ಮಲಗಿದ್ದ ಬಾಲಾಜಿ ದಾಸೂರ ಎಂಬುವವರು ಬೆಂಕಿ ಬಲೆಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 9 ಲಕ್ಷ ರೂ. ಗರಿಗರಿ ನೋಟುಗಳಿಂದ ಧನಲಕ್ಷ್ಮಿಯಾಗಿ ಕಂಗೊಳಿಸಿದ ಕನ್ನಿಕಾ ಪರಮೇಶ್ವರಿ ದೇವಿ ದಸರಾ ಹಿನ್ನೆಲೆ ಬಂಕ್ನಲ್ಲಿ ಕೆಲಸ ಮಾಡ್ತಿದ್ದ ಸಿಬ್ಬಂದಿ ರಜೆ ಮೇಲೆ ಹೋಗಿದ್ದರು. ಈ ವೇಳೆ ಮೃತ ವ್ಯಕ್ತಿ ಬಾಲಾಜಿ ಪಂಪ್ನಲ್ಲಿ ಮಲಗಿದ್ದರು. ಇದೇ ಸಂದರ್ಭದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿ ಸಂಪೂರ್ಣವಾಗಿ ಸಜೀವ ದಹನಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದು, ಅರ್ಧಕ್ಕೂ ಹೆಚ್ಚು ಭಾಗ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮನ್ನಾಏಖ್ಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪೌರಾಣಿಕ ಲೋಕವನ್ನೇ ಕಣ್ಮುಂದೆ ತೆರೆದಿಡುವ ದಶಮಂಟಪ – ಮಡಿಕೇರಿ ದಸರೆಯಲ್ಲಿ ದೇವಾನುದೇವತೆಗಳ ವೈಭವ!