ಸುತ್ತೂರು ಮಠಕ್ಕೆ ಸಿಎಂ ಡಿಕೆಶಿ – ತಾಯಿ ಚಾಮುಂಡಿಗೆ ವಿಶೇಷ ಪೂಜೆ
ಮೈಸೂರು: ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Sivakumar) ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಅರಮನೆಗೆ ಭೇಟಿ ನೀಡುವುದಕ್ಕೆ ಮುನ್ನ ಮೊದಲಿಗೆ ಮಠಕ್ಕೆ (Suttur Mutt) ಆಗಮಿಸಿದ ಮುಖ್ಯಮಂತ್ರಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಸುತ್ತೂರು ಶ್ರೀಗಳ

ಮೈಸೂರು: ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Sivakumar) ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಅರಮನೆಗೆ ಭೇಟಿ ನೀಡುವುದಕ್ಕೆ ಮುನ್ನ ಮೊದಲಿಗೆ ಮಠಕ್ಕೆ (Suttur Mutt) ಆಗಮಿಸಿದ ಮುಖ್ಯಮಂತ್ರಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಸುತ್ತೂರು ಶ್ರೀಗಳನ್ನು ಭೇಟಿಯಾದ ಮುಖ್ಯಮಂತ್ರಿಗಳು ಶ್ರೀಗಳಿಂದ ಆಶೀರ್ವಾದ ಪಡೆದರು. ಈ ವೇಳೆ ಕಾಂಗ್ರೆಸ್ ನಾಯಕರು ಸಿಎಂಗೆ ಸಾಥ್ ನೀಡಿದರು. ಸುತ್ತೂರು ಮಠದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ (Chamundeshwari Temple) ಭೇಟಿ ನೀಡಿದ ಮುಖ್ಯಮಂತ್ರಿಗಳು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ ಅವರು, ಪೂರ್ಣಾಹುತಿ ನೆರವೇರಿಸಿದರು. ಬಳಿಕ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಮಠದ ದೇವಸ್ಥಾನಕ್ಕಿದೆ ಧಾರ್ಮಿಕ ಮಹತ್ವ ಮಠದ ಒಳಭಾಗದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ. ಹಿಂದೆ ಚಾಮುಂಡಿ ಬೆಟ್ಟ ಹತ್ತಲು ಸಾಧ್ಯವಾಗದವರು ಇದೇ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು ಎಂಬ ಪ್ರತೀತಿ ಇದೆ. ಇನ್ನೂ ಸಿಎಂ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಸಚಿವರಾದ ನರೇಂದ್ರಸ್ವಾಮಿ, ಬಸವರಾಜು ಹಾಗೂ ಬಾಲಕೃಷ್ಣ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿಯೊಂದಿಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದಕ್ಕೂ ಮುನ್ನ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳಿಂದ ಆಶೀರ್ವಾದ ಪಡೆದಿದ್ದರು. ಸಚಿವರಾದ ಕೆ.ಎನ್. ರಾಜಣ್ಣ, ನರೇಂದ್ರಸ್ವಾಮಿ ಹಾಗೂ ಬಾಲಕೃಷ್ಣ ಕೂಡ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.