ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ ಬಳಿಕ ಬಾಲಿವುಡ್ ನಟರ ನಿವಾಸಗಳಿಗಿದ್ದ ಭದ್ರತೆ ಹೆಚ್ಚಳ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಬಳಿಕ ಬಾಲಿವುಡ್ ನಟರ ಮನೆಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಂಬೈ ಪೊಲೀಸರು ಜುಹು ಮತ್ತು ಬಾಂದ್ರಾ ಪ್ರದೇಶಗಳಲ್ಲಿರುವ ಹಲವಾರು ಬಾಲಿವುಡ್ ನಟರ ಮನೆಗಳ ಬಳಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಜೊತೆಗೆ ಅಕ್ಷಯ್ ಕುಮಾರ್ (Akshay Kumar) ಸೇರಿದಂತೆ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಬಳಿಕ ಬಾಲಿವುಡ್ ನಟರ ಮನೆಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಂಬೈ ಪೊಲೀಸರು ಜುಹು ಮತ್ತು ಬಾಂದ್ರಾ ಪ್ರದೇಶಗಳಲ್ಲಿರುವ ಹಲವಾರು ಬಾಲಿವುಡ್ ನಟರ ಮನೆಗಳ ಬಳಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಜೊತೆಗೆ ಅಕ್ಷಯ್ ಕುಮಾರ್ (Akshay Kumar) ಸೇರಿದಂತೆ ಇತರ ನಟರು ತಮ್ಮ ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ ಕೇಸ್ – ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರು ಅರೆಸ್ಟ್ ಈ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ, ಸದ್ಯ ಆರೋಪಿಗಳನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರಿದಿದೆ. ಆಗಿದ್ದೇನು? ಅ.18ರಂದು ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ತಮ್ಮ ಕಾರಿನಲ್ಲಿ ಹೊರಟಿದ್ದರು. ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಗುರಿಯಾಗಿಸಿ ಮೂವರು ದುಷ್ಕರ್ಮಿಗಳು ಏಳು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಅದೃಷ್ಟವಶಾತ್ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಕಾರು ಚಾಲಕರು ಗಾಯಗೊಂಡಿದ್ದಾರೆ.ಇದನ್ನೂ ಓದಿ:ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ – ಆರೋಪಿಗಳಿಗೆ 34,000 ಹಣ, ವಿದೇಶದಲ್ಲಿ ಉದ್ಯೋಗದ ಸುಪಾರಿ, ರೋಚಕ ಅಂಶ ಬಹಿರಂಗ