ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಇಲ್ಲ: CJP ಪ್ರತಿಭಟನೆ ಬಗ್ಗೆ ರುಬಿಯೊ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಇದು ಭಾರತದ ಆಂತರಿಕ ರಾಜಕೀಯ ವಿಚಾರವಾಗಿದೆ ಎಂದು ಹೇಳಿದ್ದಾರೆ.ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳ ಹಿನ್ನೆಲೆಯಲ್ಲಿ ಭಾರತಕ್ಕೆ ಭೇಟಿ ನೀಡಿರುವ ಅವರು, ಮಾಧ್ಯಮ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಇದು ಭಾರತದ ಆಂತರಿಕ ರಾಜಕೀಯ ವಿಚಾರವಾಗಿದೆ ಎಂದು ಹೇಳಿದ್ದಾರೆ.ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳ ಹಿನ್ನೆಲೆಯಲ್ಲಿ ಭಾರತಕ್ಕೆ ಭೇಟಿ ನೀಡಿರುವ ಅವರು, ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಭಾರತದ ಆಂತರಿಕ ವಿಚಾರಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.‘ಇದು ಭಾರತದ ಆಂತರಿಕ ವಿಚಾರ. ಈ ವಿಷಯದಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಹೀಗಾಗಿ, ಭಾರತದ ಆಂತರಿಕ ವಿಚಾರಗಳ ಕುರಿತು ನಾನು ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಈ ವಿಷಯವನ್ನು ನಿರ್ಧರಿಸಿ, ಪರಿಹರಿಸಿಕೊಳ್ಳುವುದು ಭಾರತೀಯರ ಜವಾಬ್ದಾರಿ’ ಎಂದು ತಿಳಿಸಿದ್ದಾರೆ.ಅಮೆರಿಕದಲ್ಲಿಯೂ ಪ್ರತಿದಿನ ಪ್ರತಿಭಟನೆಗಳು ನಡೆಯುತ್ತವೆ ಎಂದು ಹೇಳಿದ ರುಬಿಯೊ, ಯುರೋಪಿನಲ್ಲಿ ನಡೆಯುತ್ತಿರುವಂತೆ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸುವುದು, ಕಟ್ಟಡಗಳಿಗೆ ನುಗ್ಗುವುದು ಮತ್ತು ಬೆಂಕಿ ಹಚ್ಚುವ ಘಟನೆಗಳು ಅಮೆರಿಕದಲ್ಲಿ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.‘ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಲು ಜನರು ಪ್ರತಿಭಟನೆ ನಡೆಸುತ್ತಾರೆ. ಇದು ಪ್ರಜಾಪ್ರಭುತ್ವ ಜೀವಂತವಾಗಿರುವುದರ ಸಂಕೇತವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.