ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಪೂರ್ಣ ಭಿನ್ನವಾಗಿರಲಿದೆ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಪ್ರಸ್ತಾವಿತ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಕುರಿತಾದ ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರು (ಭಾರತ) ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ನಾವೂ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಈ ಒಪ್ಪಂದವು ಹಿಂದಿನ ಒಪ್ಪಂದಗಳಿಗ
ವಾಷಿಂಗ್ಟನ್: ಪ್ರಸ್ತಾವಿತ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಕುರಿತಾದ ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರು (ಭಾರತ) ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ನಾವೂ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಈ ಒಪ್ಪಂದವು ಹಿಂದಿನ ಒಪ್ಪಂದಗಳಿಗಿಂತ ಸಾಕಷ್ಟು ಭಿನ್ನವಾಗಿರಲಿದೆ’ ಎಂದು ಹೇಳಿದ್ದಾರೆ.ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ, ರಕ್ಷಣೆ ಮತ್ತು ಜನರ ನಡುವಿನ ಬಾಂಧವ್ಯದಂತಹ ಕ್ಷೇತ್ರಗಳ ಮೇಲೆ ಗಮನಹರಿಸುವ ಮೂಲಕ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜೈಶಂಕರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ವಾಷಿಂಗ್ಟನ್ನಲ್ಲಿ ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ಅವರನ್ನು ಭೇಟಿಯಾಗಿ, ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚಿಸಿದ್ದರು.ಭಾರತ ಮತ್ತು ಅಮೆರಿಕ ಫೆಬ್ರುವರಿಯಲ್ಲಿ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತದ ಚೌಕಟ್ಟನ್ನು ಅಂತಿಮಗೊಳಿಸಿರುವುದಾಗಿ ಘೋಷಿಸಿದ್ದವು. ಆದಾಗ್ಯೂ, ಅಮೆರಿಕದಲ್ಲಿ ಸುಂಕದ ವ್ಯವಸ್ಥೆಯಲ್ಲಿನ ಬದಲಾವಣೆಗಳಿಂದಾಗಿ, ಈ ಒಪ್ಪಂದದ ಕುರಿತು ಮತ್ತಷ್ಟು ಮಾತುಕತೆಗಳು ನಡೆಯುತ್ತಿವೆ.