ನಾನು ಟ್ರಾವೆಲ್ ಏಜೆಂಟ್ ಅಲ್ಲ: ರಾಹುಲ್ ಗಾಂಧಿ ವಿದೇಶ ಪ್ರವಾಸದ ಬಗ್ಗೆ ಶಶಿ ತರೂರ್
ತಿರುವನಂತಪುರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ‘ನಾನೇನು ಟ್ರಾವೆಲ್ ಏಜೆಂಟ್ ಅಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ

ತಿರುವನಂತಪುರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ‘ನಾನೇನು ಟ್ರಾವೆಲ್ ಏಜೆಂಟ್ ಅಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಬಗ್ಗೆ ತಮ್ಮನ್ನು ಪ್ರಶ್ನಿಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ.‘ನಾನೇನು ಟ್ರಾವೆಲ್ ಏಜೆಂಟ್ ಅಲ್ಲ. ಈ ಪ್ರಶ್ನೆ ನನಗೆ ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ. ನಾನೀಗ ದೆಹಲಿಯಿಂದ ಇಲ್ಲಿಗೆ ಬಂದಿದ್ದೇನೆ. ಅದಕ್ಕೆ ಕಾರಣವೇನು? ಪ್ರತಿಯೊಬ್ಬರಿಗೂ ಕೆಲವು ಜವಾಬ್ದಾರಿಗಳಿರುತ್ತವೆ. ಹಾಗಾಗಿ, ಈ ವಿಷಯದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.ಇದೇ ವೇಳೆ, ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸವನ್ನು ಬಿಜೆಪಿ ಟೀಕಿಸಿದ್ದು, ದೆಹಲಿಯಲ್ಲಿ ಪ್ರತಿಭಟನೆಗಳ ವೇಳೆ ಸುಳ್ಳುಗಳನ್ನು ಕೂಗುತ್ತಾ ಸುಸ್ತಾದ ಬಳಿಕ ರಾಹುಲ್ ರಜೆಯ ಮೇಲೆ ವಿದೇಶಕ್ಕೆ ತೆರಳಿದ್ದಾರೆ ಎಂದು ವ್ಯಂಗ್ಯವಾಡಿದೆ.