ಬೀದರ್ | ಪೆಟ್ರೋಲ್ ಬಂಕ್ ಕೊಠಡಿಯಲ್ಲಿ ಬೆಂಕಿ ಅವಘಡ: ವ್ಯಕ್ತಿ ಸಾವು
ಚಿಟಗುಪ್ಪ (ಬೀದರ್ ಜಿಲ್ಲೆ) : ತಾಲ್ಲೂಕಿನ ನಿರ್ಣಾವಾಡಿ ಕ್ರಾಸ್ ಸಮೀಪದ ಪೆಟ್ರೋಲ್ ಬಂಕ್ನ ಕೊಠಡಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಬಾಲಪ್ಪ (50) ಮೃತ ವ್ಯಕ್ತಿ. ಬಾಲಪ್ಪ ಅವರು ಕೊಠಡಿಯಲ್ಲಿದ್ದಾಗ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿಕೊಂಡು ಮೃತಪಟ್ಟಿದ್ದಾರ

ಚಿಟಗುಪ್ಪ (ಬೀದರ್ ಜಿಲ್ಲೆ) : ತಾಲ್ಲೂಕಿನ ನಿರ್ಣಾವಾಡಿ ಕ್ರಾಸ್ ಸಮೀಪದ ಪೆಟ್ರೋಲ್ ಬಂಕ್ನ ಕೊಠಡಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಬಾಲಪ್ಪ (50) ಮೃತ ವ್ಯಕ್ತಿ. ಬಾಲಪ್ಪ ಅವರು ಕೊಠಡಿಯಲ್ಲಿದ್ದಾಗ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು, ಬೆಂಕಿ ನಂದಿಸಿದ್ದಾರೆ. ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ‘ಬೆಂಕಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ತನಿಖೆ ನಂತರ ತಿಳಿಯಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಪೆಟ್ರೋಲ್ ಬಂಕ್ ಸುತ್ತ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು
Read the complete story at Prajavani