ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್
– ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದ ಪರಮೇಶ್ವರ್ ಬೆಂಗಳೂರು: ದಸರಾದಲ್ಲಿ ನಂದಿಧ್ವಜ (Mysuru Dasara) ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ (D K Shivakumar) ತೆರಳುತ್ತಿದ್ದ ಸಚಿವರನ್ನು ಎಸ್ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwara) ಪ್ರತಿಕ್ರಿಯಿಸಿ, ಮೇಲಾಧಿಕಾ

– ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದ ಪರಮೇಶ್ವರ್ ಬೆಂಗಳೂರು: ದಸರಾದಲ್ಲಿ ನಂದಿಧ್ವಜ (Mysuru Dasara) ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ (D K Shivakumar) ತೆರಳುತ್ತಿದ್ದ ಸಚಿವರನ್ನು ಎಸ್ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwara) ಪ್ರತಿಕ್ರಿಯಿಸಿ, ಮೇಲಾಧಿಕಾರಿಗಳ ಸೂಚನೆ ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಸಚಿವರನ್ನು ಎಸ್ಪಿ ತಡೆದಿರುವ ವಿಡಿಯೋ ವೈರಲ್ ಆಗಿರುವ ಕುರಿತು ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದು ಹೇಳಿದ್ದಾರೆ. ಈ ಕುರಿತು ಬಿಜೆಪಿ ಮಾಡಿರುವ ಆರೋಪಗಳಿಗೆ ಡಿಸಿಎಂ ಪ್ರತಿಕ್ರಿಯಿಸಿ, ಮೈಸೂರು ದಸರಾ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಶಿಷ್ಟಾಚಾರ ಪಾಲಿಸುವ ವೇಳೆ ನಡೆದ ಘಟನೆಗಳಿಗೆ ಜಾತಿ ಬಣ್ಣ ಹಚ್ಚುವುದು ಕೀಳುಮಟ್ಟದ ಆಲೋಚನೆಯಾಗಿದೆ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು. ಮುಖ್ಯಮಂತ್ರಿಗಳಿಗೆ ಅವರದೇ ಆದ ಶಿಷ್ಟಾಚಾರವಿರುತ್ತದೆ. ಅದನ್ನು ಪೊಲೀಸರು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ವಿಶೇಷವಾಗಿ ಅಪಾರ ಜನಸಂದಣಿ ಇರುವ ಸಂದರ್ಭಗಳಲ್ಲಿ ಭದ್ರತೆ ಮತ್ತು ಶಿಷ್ಟಾಚಾರದ ನಿಯಮಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಬೇರೆ ಯಾರನ್ನೂ ಒಳಗೆ ಬಿಡಬಾರದು ಎಂಬ ಸೂಚನೆ ಪೊಲೀಸರಿಗೆ ಇದ್ದಿರಬಹುದು. ಈ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದರೆ, ಮೇಲಾಧಿಕಾರಿಗಳಿಂದ ಬಂದ ಸೂಚನೆಗಳನ್ನು ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು ಮುಂದೆ ಸಾಗುತ್ತಿದ್ದ ಸಂದರ್ಭದಲ್ಲಿ ಸಚಿವರನ್ನು ಪೊಲೀಸರು ತಡೆದಿದ್ದರೂ, ನಂತರ ಮುಖ್ಯಮಂತ್ರಿಗಳೇ ಹಿಂದಿರುಗಿ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು. ಈ ಘಟನೆಯನ್ನು ಮುಂದಿಟ್ಟುಕೊಂಡು ʻದಲಿತ ಸಚಿವರುʼ ಎಂಬ ಪದವನ್ನು ಪದೇ ಪದೇ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಚಿವರು ಎಂದು ಕರೆದರೆ ಸಾಕಲ್ಲವೇ? ಪ್ರತಿಯೊಬ್ಬರನ್ನೂ ಅವರ ಜಾತಿಯ ಹೆಸರಿನಿಂದಲೇ ಗುರುತಿಸಬೇಕೇ? ಬೇರೆ ಸಚಿವರನ್ನು ಅವರ ಜಾತಿಯ ಹೆಸರಿನಿಂದ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. ಲಕ್ಷಾಂತರ ಜನರು ಸೇರುವ ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುವ ಸಾಧ್ಯತೆಯಿರುತ್ತದೆ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಕೆಲವರಿಗೆ ಪ್ರವೇಶಪತ್ರ ತಲುಪದೇ ಇರಬಹುದು. ಪ್ರಮುಖ ವ್ಯಕ್ತಿಗಳಿಗೆ ಪಾಸ್ ನೀಡುವ ವಿಚಾರದಲ್ಲಿ ಸಂವಹನದ ಕೊರತೆ ಅಥವಾ ಗಮನಕ್ಕೆ ಬಾರದ ತಪ್ಪುಗಳು ಸಂಭವಿಸಬಹುದು. ಇಂತಹ ಲೋಪಗಳು ನಡೆದಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ, ಅವುಗಳನ್ನೇ ದೊಡ್ಡ ವಿವಾದವನ್ನಾಗಿ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ದಸರಾ ಜಂಬೂಸವಾರಿ ದಿನವೇ ರಕ್ತದೋಕುಳಿ; ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ ನನಗೆ ದೊರೆತ ಮಾಹಿತಿಯ ಪ್ರಕಾರ, ಹತ್ತು ದಿನಗಳ ದಸರಾ ಉತ್ಸವದ ಅವಧಿಯಲ್ಲಿ ಸುಮಾರು 15ರಿಂದ 20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಿಸಿವೆ. ದಸರಾ ವೀಕ್ಷಿಸಲು ಬಂದ ಜನರು ಸುರಕ್ಷಿತವಾಗಿ ತಮ್ಮ ಮನೆಗಳಿಗೆ ಮರಳಿದ್ದಾರೆ. ಈ ಸಾಧನೆಯನ್ನು ನಾವು ಮೆಚ್ಚಬೇಕಲ್ಲವೇ ಎಂದರು. ತುಮಕೂರು ದಸರಾ ಉತ್ಸವದಲ್ಲಿಯೂ ನಿರೀಕ್ಷೆಗೂ ಮೀರಿ ಲಕ್ಷಾಂತರ ಜನರು ಭಾಗವಹಿಸಿದ್ದರು. ಇಂತಹ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಂದಣಿಯನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ದೊಡ್ಡ ಕಾರ್ಯಕ್ರಮಗಳಲ್ಲಿ ಸಂಭವಿಸುವ ಸಣ್ಣಪುಟ್ಟ ಘಟನೆಗಳನ್ನು ಮುಂದಿಟ್ಟುಕೊಂಡು ಒಟ್ಟಾರೆ ವ್ಯವಸ್ಥೆಯನ್ನು ದೂಷಿಸುವುದು ಸರಿಯಲ್ಲ ಎಂದರು.ಇದನ್ನೂ ಓದಿ: ಬ್ಲೂ ಡ್ರಮ್ ಕೊಲೆ ಕೇಸ್ – ಜೈಲಿನಲ್ಲಿರೋ ಮುಸ್ಕಾನ್ ಮಗುವನ್ನ ದತ್ತು ಪಡೆಯಲು ಮುಂಬೈ ಇನ್ಫ್ಲುಯೆನ್ಸರ್ ಅರ್ಜಿ