ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ಅನುಮತಿ ನಿರಾಕರಣೆ
ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಕ್ಟೋಬರ್ 30ರಂದು ನಡೆಯಬೇಕಿದ್ದ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಭದ್ರತಾ ಬೆದರಿಕೆಗಳ ಕುರಿತ ಮಾಹಿತಿ, ಹಬ್ಬದ ಋತು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಇತರ ಕಳವಳಗಳು ಅನುಮತಿ ನಿರಾಕರಣೆಗೆ ಪ

ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಕ್ಟೋಬರ್ 30ರಂದು ನಡೆಯಬೇಕಿದ್ದ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಭದ್ರತಾ ಬೆದರಿಕೆಗಳ ಕುರಿತ ಮಾಹಿತಿ, ಹಬ್ಬದ ಋತು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಇತರ ಕಳವಳಗಳು ಅನುಮತಿ ನಿರಾಕರಣೆಗೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.ದಕ್ಷಿಣ ದೆಹಲಿಯ ಉಪ ಪೊಲೀಸ್ ಆಯುಕ್ತರ (ಡಿಸಿಪಿ) ಕಚೇರಿಯು ಟಿಕೆಟ್ ಬುಕಿಂಗ್ ವೇದಿಕೆ ಬುಕ್ಮೈಶೋಗೆ ಪತ್ರ ಬರೆದಿದ್ದು, ‘ಅಕ್ಟೋಬರ್ 14, 2026ರಂದು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದೆ.ಪೊಲೀಸ್ ಅನುಮತಿ ನಿರಾಕರಣೆಯ ವರದಿಗಳ ನಡುವೆಯೂ ಬುಕ್ಮೈಶೋ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮದ ಟಿಕೆಟ್ ಬುಕಿಂಗ್ ಸ್ಥಗಿತಗೊಂಡಿಲ್ಲ. ಹೀಗಾಗಿ, ಕಾರ್ಯಕ್ರಮ ನಡೆಯುವ ಕುರಿತು ಅನಿಶ್ಚಿತತೆ ಮುಂದುವರಿದಿದೆ.
Read the complete story at Prajavani