‘ಇಂಡಿಯಾ’ ಒಕ್ಕೂಟದಿಂದ ಆನ್ಲೈನ್ ಸಭೆ: ಪ್ರತಿಭಟನೆ ರೂಪುರೇಷೆ ಸಿದ್ಧತೆ
ನವದೆಹಲಿ: ಮತಗಳ್ಳತನ ವಿರೋಧಿಸಿ ನಡೆಯಲಿರುವ ಹೋರಾಟದ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಂಜೆ ಆನ್ಲೈನ್ನಲ್ಲಿ ಸಭೆ ನಡೆಸಲಿದ್ದಾರೆ.ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ, ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಖಂಡಿಸಿ ದೇಶದಾದ್ಯಂತ ಬೃಹತ್ ಪ್ರತಿಭಟನೆ ಕುರಿತು ಇಂದಿನ

ನವದೆಹಲಿ: ಮತಗಳ್ಳತನ ವಿರೋಧಿಸಿ ನಡೆಯಲಿರುವ ಹೋರಾಟದ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಂಜೆ ಆನ್ಲೈನ್ನಲ್ಲಿ ಸಭೆ ನಡೆಸಲಿದ್ದಾರೆ.ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ, ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಖಂಡಿಸಿ ದೇಶದಾದ್ಯಂತ ಬೃಹತ್ ಪ್ರತಿಭಟನೆ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಭೆಯಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನವೆಂಬರ್ 1ರಂದು ಪ್ರತಿಭಟನೆ ನಡೆಯಲಿದೆ ಎಂದು ಒಕ್ಕೂಟ ಮಾಹಿತಿ ನೀಡಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ 'ಇಂಡಿಯಾ' ಒಕ್ಕೂಟದ ಸಂಸದರು ಅ.12ರಂದು ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಸಂಸದರನ್ನು ತಡೆದಿದ್ದರು. ಇದರಿಂದ ಆಕ್ರೋಶಗೊಂಡ ಸಂಸದರು ಸಂಸತ್ ಮಾರ್ಗದ ರಸ್ತೆಯಲ್ಲೇ ಧರಣಿ ಕುಳಿತಿದ್ದರು. ಪ್ರತಿಭಟನೆ ನಡೆಸುತ್ತಿದ್ದ 'ಇಂಡಿಯಾ' ಒಕ್ಕೂಟದ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಈ ಕುರಿತು ಸಭೆ ನಡೆಸಿದ್ದ ರಾಹುಲ್ ಗಾಂಧಿ ಅವರು ‘ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಪೋಸ್ಟ್ ಹಂಚಿಕೊಂಡಿದ್ದರು.