ಸಿಎಂ ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಜೆಡಿಎಸ್ ವಕ್ತಾರೆ ವಿರುದ್ಧ FIR
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಜೆಡಿಎಸ್ ವಕ್ತಾರೆ ಪ್ರಶಾಂತಿ ಸುಭಾಷ್ ಅವರ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕುಶಾಲ್ ಹರುವೇಗೌಡ ನೀಡಿದ ದೂರು ಆಧರಿಸಿ, ಪ್ರಕರಣ ದಾ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಜೆಡಿಎಸ್ ವಕ್ತಾರೆ ಪ್ರಶಾಂತಿ ಸುಭಾಷ್ ಅವರ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕುಶಾಲ್ ಹರುವೇಗೌಡ ನೀಡಿದ ದೂರು ಆಧರಿಸಿ, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತನಿಖೆಗೆ ಹಾಜರಾಗುವಂತೆ ಪ್ರಶಾಂತಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ವೀಕ್ಷಿಸುವಾಗ ಪ್ರಶಾಂತಿ ಅವರ ಆಕ್ಷೇಪಾರ್ಹ ಪೋಸ್ಟ್ ಮತ್ತು ವಿಡಿಯೊ ಕಂಡುಬಂದಿತ್ತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕುಶಾಲ್ ದೂರಿನಲ್ಲಿ ಕೋರಿದ್ದರು.‘ಸುಳ್ಳು ಸುದ್ದಿಗಳನ್ನು ಹಬ್ಬಿಸಲು, ರಾಜ್ಯ ಸರ್ಕಾರವು ಮಾಧ್ಯಮಗಳನ್ನು ದುರುಪ ಯೋಗಪಡಿಸಿ ಕೊಳ್ಳು ತ್ತಿದೆ’ ಎಂದು ಆರೋಪಿಸಿ ಪ್ರಶಾಂತಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದರು.‘ಇದು ಭಿನ್ನಾಭಿಪ್ರಾಯದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ. ನಮ್ಮಂತಹ ಮಹಿಳೆಯರು ಸತ್ಯಕ್ಕಾಗಿ ಮತ್ತು ಒಂದು ಉದ್ದೇಶಕ್ಕಾಗಿ ಹೋರಾಡಿದಾಗ ಧ್ವನಿಯನ್ನು ಅಡಗಿಸಲು ಸರ್ಕಾರವು ಎಫ್ಐಆರ್ ದಾಖಲು ಮಾಡಿದೆ. ಮಹಿಳೆಯಾಗಿ, ತಾಯಿಯಾಗಿ ಧ್ವನಿ ಎತ್ತುವುದು ತಪ್ಪೇ? ಇದರಿಂದ ನನ್ನ ಹಕ್ಕುಗಳ ಉಲ್ಲಂಘನೆ ಆಗಿದ್ದು, ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ’ ಎಂದು ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದಕ್ಕೆ ಪ್ರಶಾಂತಿ ಸುಭಾಷ್ ಆಕ್ರೋಶ ಹೊರಹಾಕಿದ್ದಾರೆ.