IND vs NZ: ಫಿಲಿಪ್ಸ್ ಆರ್ಭಟ, ಭಾರತಕ್ಕೆ ಬೃಹತ್ ಗುರಿ ನೀಡಿದ ಕಿವೀಸ್
ಕ್ರೈಸ್ಟ್ಚರ್ಚ್: ಇಲ್ಲಿನ ಹ್ಯಾಗ್ಲೆ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 225 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 226 ರನ್ ಗುರಿ ನೀಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕರಾದ ಟಿಮ್

ಕ್ರೈಸ್ಟ್ಚರ್ಚ್: ಇಲ್ಲಿನ ಹ್ಯಾಗ್ಲೆ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 225 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 226 ರನ್ ಗುರಿ ನೀಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕರಾದ ಟಿಮ್ ಸೈಫರ್ಟ್ (24 ರನ್) ಮತ್ತು ಫಿನ್ ಅಲೆನ್ (45 ರನ್) ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ಗೆ 49 ರನ್ ಕಲೆಹಾಕಿತು. ನಂತರ ಬಂದ ಡ್ಯಾರಿಲ್ ಮಿಚೆಲ್ (28), ಬೆವೊನ್ ಜಾಕೋಬ್ಸ್ (31) ರನ್ ಸಿಡಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಭಾರತೀಯ ಬೌಲರ್ಗಳ ಮೇಲೆ ಸವಾರಿ ಮಾಡಿದ ಗ್ಲೆನ್ ಫಿಲಿಪ್ಸ್ ಕೇವಲ 40 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ಗಳ ನೆರವಿನಿಂದ ಅಜೇಯ 82 ರನ್ ಸಿಡಿಸಿ ತಂಡದ ಮೊತ್ತವನ್ನು 225 ಆಗುವಂತೆ ನೋಡಿಕೊಂಡರು.ಭಾರತದ ಪರ ಮಯಾಂಕ್ ಯಾದವ್, ಅಕ್ಷರ್ ಪಟೇಲ್ ಮತ್ತು ಅರ್ಶದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
Read the complete story at Prajavani