ವಿಧಾನ ಪರಿಷತ್ ಚುನಾವಣೆ: ಪ್ರಚಾರ ಅಂತ್ಯ, ಅ.23ರಂದು ಮತದಾನ
ಬೆಂಗಳೂರು: ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ಶುಕ್ರವಾರ (ಅ.23) ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 8ರಿಂದ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ನಡೆಯುತ್ತಿದ್ದು, ಮೂರು ಕ್ಷೇತ್ರಗಳಲ್

ಬೆಂಗಳೂರು: ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ಶುಕ್ರವಾರ (ಅ.23) ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 8ರಿಂದ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ನಡೆಯುತ್ತಿದ್ದು, ಮೂರು ಕ್ಷೇತ್ರಗಳಲ್ಲಿ ಹಾಲಿ ಇರುವ ವಿಧಾನಪರಿಷತ್ ಸದಸ್ಯರು ಪುನರಾಯ್ಕೆ ಬಯಸಿ ಕಣಕ್ಕೆ ಇಳದಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಎಂ. ಚಿದಾನಂದ ಗೌಡ ಅವರ ಬದಲು ಬಿಜೆಪಿ ಈ ಬಾರಿ ಕೆ.ಎಂ. ಸುರೇಶ್ ಅವರನ್ನು ಅಭ್ಯರ್ಥಿಯಾಗಿಸಿದೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಎಸ್.ವಿ. ಸಂಕನೂರ, ಕಾಂಗ್ರೆಸ್ನಿಂದ ಮೋಹನ ಲಿಂಬಿಕಾಯಿ ಸೇರಿದಂತೆ 14 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಶಶೀಲ್ ಜಿ. ನಮೋಶಿ, ಕಾಂಗ್ರೆಸ್ನಿಂದ ಶರಣಪ್ಪ ಮಟ್ಟೂರು ಸೇರಿದಂತೆ 13 ಅಭ್ಯರ್ಥಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ನ ಪುಟ್ಟಣ್ಣ, ಜೆಡಿಎಸ್ನ ಎ.ಪಿ. ರಂಗನಾಥ್ ಸೇರಿದಂತೆ ಆರು ಅಭ್ಯರ್ಥಿಗಳು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ನ ಶಶಿ ಹುಲಿಕುಂಟೆಮಠ್ ಸೇರಿದಂತೆ 10 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಎಲ್ಲ ನಾಲ್ಕೂ ಕ್ಷೇತ್ರಗಳ ಮತಗಳ ಎಣಿಕೆ ಕಾರ್ಯ 27ರಂದು ನಡೆಯಲಿದೆ.