ವಿರೋಧ ಪಕ್ಷದ ನಾಯಕ ಆರ್. ಅಶೋಕಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಮಧ್ಯಾಹ್ನ ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದರು. ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದ ಸ್ಟಿಂಗ್ ಆಪರೇಷನ್ ಬಗ್ಗೆ ಕೇಳಿದರೆ ಮಾಹಿತಿ ಕೊಡುವೆ. ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಮಧ್ಯಾಹ್ನ ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದರು. ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದ ಸ್ಟಿಂಗ್ ಆಪರೇಷನ್ ಬಗ್ಗೆ ಕೇಳಿದರೆ ಮಾಹಿತಿ ಕೊಡುವೆ. ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಲು ನಮ್ಮ ಹೋರಾಟವೇ ಕಾರಣ. ಈ ಹೋರಾಟದ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ’ ಎಂದರು. ‘ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ರೈತರ ಹಿತಕ್ಕಾಗಿ ಏನು ಬೇಕಾದರೂ ಮಾಡಲು ನಾವು ಸಿದ್ಧ. ಆಹ್ವಾನ ಬಂದರೆ ಎನ್ಡಿಎ ಸಭೆಯಲ್ಲಿ ಚರ್ಚಿಸಿ ಮುಂದುವರಿಯುತ್ತೇವೆ’ ಎಂದರು.
Read the complete story at Prajavani