ಜನಾಂಗೀಯ ನಿಂದನೆ: ಕಂಟೆಂಟ್ ಕ್ರಿಯೇಟರ್ ಅಮೀರ್ ಶೋಕೀನ್ಗೆ ನ್ಯಾಯಾಂಗ ಬಂಧನ
ನವದೆಹಲಿ: ತ್ರಿಪುರಾದ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ಆರೋಪದಡಿ ಬಂಧಿತರಾಗಿರುವ ಕಂಟೆಂಟ್ ಕ್ರಿಯೇಟರ್ ಅಮೀರ್ ಶೋಕೀನ್ ಅವರನ್ನು ದೆಹಲಿ ನ್ಯಾಯಾಲಯವು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಶುಕ್ರವಾರ ಒಪ್ಪಿಸಿದೆ.ಜನಾಂಗೀಯ ನಿಂದನೆ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿದ ಬೆನ್ನಲ್ಲೇ, ಅಮೀರ್ ವಿರುದ್ಧ ದೆಹಲಿ ಪೊಲೀಸರು ಗುರುವಾರ ಸ್ವ

ನವದೆಹಲಿ: ತ್ರಿಪುರಾದ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ಆರೋಪದಡಿ ಬಂಧಿತರಾಗಿರುವ ಕಂಟೆಂಟ್ ಕ್ರಿಯೇಟರ್ ಅಮೀರ್ ಶೋಕೀನ್ ಅವರನ್ನು ದೆಹಲಿ ನ್ಯಾಯಾಲಯವು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಶುಕ್ರವಾರ ಒಪ್ಪಿಸಿದೆ.ಜನಾಂಗೀಯ ನಿಂದನೆ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿದ ಬೆನ್ನಲ್ಲೇ, ಅಮೀರ್ ವಿರುದ್ಧ ದೆಹಲಿ ಪೊಲೀಸರು ಗುರುವಾರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಬಂಧಿಸಿದ್ದರು.‘ಈ ವಿಡಿಯೊವನ್ನು ಒಂದು ತಿಂಗಳ ಹಿಂದೆ ಅಹಮದಾಬಾದ್ನಲ್ಲಿ ಮಾಡಲಾಗಿದೆ. ಈ ಕೃತ್ಯದಲ್ಲಿ ಏಳರಿಂದ ಎಂಟು ಮಂದಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.‘ದೆಹಲಿ ಪೊಲೀಸರ ಕಸ್ಟಡಿಯಲ್ಲಿರುವ ಅಮೀರ್ನನ್ನು ತ್ರಿಪುರಾಕ್ಕೆ ಕರೆತರುವ ಪ್ರಕ್ರಿಯೆಯನ್ನು ರಾಜ್ಯ ಪೊಲೀಸರು ಆರಂಭಿಸಿದ್ದಾರೆ’ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಶುಕ್ರವಾರ ತಿಳಿಸಿದ್ದಾರೆ.
Read the complete story at Prajavani