ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನ – ದೆಹಲಿ ಮೂಲದ ರಿತೇಶ್ ಪಾಂಡೆ ಲಾಕ್
ನವದೆಹಲಿ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿ ಮಾಡಿದ್ದ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಹಸ್ಯ ಸ್ಥಳದಲ್ಲಿ ಸಿಸಿಬಿ ಸೈಬರ್ ಕ್ರೈಮ್ ಪೊಲ

ನವದೆಹಲಿ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿ ಮಾಡಿದ್ದ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಹಸ್ಯ ಸ್ಥಳದಲ್ಲಿ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನನ್ನು ಬ್ಲಾಕ್ಮೇಲ್ ಮಾಡಲು ಸ್ಟಿಂಗ್, ನಾನು ಯಾವುದೇ ತಪ್ಪು ಮಾಡಿಲ್ಲ: ಸಿದ್ದರಾಮಯ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಬಗ್ಗೆ ಅ.23 ರಂದು ಅವರು ಮಾತನಾಡಿದ್ದರು. ಆಗ ಇದು ನನ್ನನ್ನು ಬ್ಲಾಕ್ಮೇಲ್ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡುವುದನ್ನು ತಡೆಯಲು ಕೋರ್ಟ್ ಆದೇಶ ತಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಈ ವಿಚಾರ ನನ್ನ ಗಮನಕ್ಕೆ ಬಂತು. ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಜನರಿಗೆ ಸತ್ಯಾಂಶ ತಿಳಿಯಬೇಕು ಎನ್ನುವ ಉದ್ದೇಶದಿಂದ ನಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಇದರಲ್ಲಿ ಯಾವುದೇ ಹುರುಳಿಲ್ಲ, ಸಂಪೂರ್ಣ ಸತ್ಯಕ್ಕೆ ದೂರವಾದ ಆರೋಪವಿದು ಎಂದು ತಿಳಿಸಿದ್ದರು. ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಲಿ: ಭೋಜೇಗೌಡ