ಚನ್ನಮ್ಮನವರ ಸಾಹಸ, ತ್ಯಾಗ ನಮ್ಮೆಲ್ಲರಿಗೂ ಸ್ಫೂರ್ತಿ– ಜಿಲ್ಲಾಧಿಕಾರಿ ಶಿಲ್ಪಾ
ಬೀದರ್: ‘ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ದೃಢವಾಗಿ ಹೋರಾಡಿ, ಕಿತ್ತೂರು ಸಂಸ್ಥಾನದ ಸ್ವಾಭಿಮಾನವನ್ನು ಕಾಪಾಡಿದ ರಾಣಿ ಚನ್ನಮ್ಮನವರ ಶೌರ್ಯ, ಸಾಹಸ ಹಾಗೂ ತ್ಯಾಗ ನಮ್ಮೆಲ್ಲರಿಗೂ ಸದಾ ಸ್ಫೂರ್ತಿ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವೀರವನಿತೆ ಕಿತ್ತೂರು ರಾಣಿ ಚನ್ನಮ್

ಬೀದರ್: ‘ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ದೃಢವಾಗಿ ಹೋರಾಡಿ, ಕಿತ್ತೂರು ಸಂಸ್ಥಾನದ ಸ್ವಾಭಿಮಾನವನ್ನು ಕಾಪಾಡಿದ ರಾಣಿ ಚನ್ನಮ್ಮನವರ ಶೌರ್ಯ, ಸಾಹಸ ಹಾಗೂ ತ್ಯಾಗ ನಮ್ಮೆಲ್ಲರಿಗೂ ಸದಾ ಸ್ಫೂರ್ತಿ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವೀರವನಿತೆ ಕಿತ್ತೂರು ರಾಣಿ ಚನ್ನಮ್ಮನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದಕ್ಕೂ ಮುನ್ನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಉಪವಿಭಾಗಾಧಿಕಾರಿ ಅಭಿನವ್ ಜೈನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.261024-33-1214461852
Read the complete story at Prajavani