IND vs NZ: ಮತ್ತೆ ಮಿಂಚಿದ ಫಿಲಿಪ್ಸ್, ಭಾರತಕ್ಕೆ ಹೋರಾಟದ ಗುರಿ ನೀಡಿದ ಕಿವೀಸ್
ಕ್ರೈಸ್ಟ್ಚರ್ಚ್: ಇಲ್ಲಿನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತದ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 181 ರನ್ಗಳ ಗುರಿ ನಿಡಿದೆಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ತಂಡವು ಆರಂಭಿಕ ಆಘಾತ ಅನುಭವಿ

ಕ್ರೈಸ್ಟ್ಚರ್ಚ್: ಇಲ್ಲಿನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತದ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 181 ರನ್ಗಳ ಗುರಿ ನಿಡಿದೆಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿತು. ಮೊದಲ 5.2 ಓವರ್ಗಳಲ್ಲಿ 41 ರನ್ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.ಈ ಹಂತದಲ್ಲಿ ಗ್ಲೆನ್ ಫಿಲಿಪ್ಸ್ (70) ಮತ್ತು ಬೆವೋನ್ ಜೇಕಬ್ಸ್ (58) 116 ರನ್ಗಳ ಜೊತೆಯಾಟ ಆಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಅಂತಿಮವಾಗಿ ನ್ಯೂಜಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು. ಭಾರತದ ಪರ ಅರ್ಶದೀಪ್ ಕುಮಾರ್ 2 ವಿಕೆಟ್ ಪಡೆದು ಮಿಂಚಿದರೆ, ಭುವನೇಶ್ವರ್ ಕುಮಾರ್, ನಿತೀಶ್ ಕುಮಾರ್ ರೆಡ್ಡಿ ಮತ್ತು ಪ್ರಿನ್ಸ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
Read the complete story at Prajavani