KSOU ವಿರುದ್ಧ ಭುಗಿಲೆದ್ದ ಆಕ್ರೋಶ – ABVPಯಿಂದ ಕಚೇರಿಗೆ ಮುತ್ತಿಗೆ ಯತ್ನ
ಶಿವಮೊಗ್ಗ: ನಗರದ (Shivamogga) ಕೆಎಸ್ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊಬೈಲ್, ಪುಸ್ತಕ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಅಕ್ರಮವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು. ಇದರ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಆಲ್ಕೋಳ ಸರ್ಕಲ್ ಸಮೀಪವಿರುವ

ಶಿವಮೊಗ್ಗ: ನಗರದ (Shivamogga) ಕೆಎಸ್ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊಬೈಲ್, ಪುಸ್ತಕ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಅಕ್ರಮವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು. ಇದರ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಆಲ್ಕೋಳ ಸರ್ಕಲ್ ಸಮೀಪವಿರುವ KSOU ಪ್ರಾದೇಶಿಕ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಪ್ರಾದೇಶಿಕ ನಿರ್ದೇಶಕರ ವಿರುದ್ಧ ತನಿಖೆಯ ಜೊತೆಗೆ ಕಠಿಣ ಕ್ರಮಕೈಗೊಳ್ಳಬೇಕು. ಶುಲ್ಕ ಪಡೆಯದೇ ಕೂಡಲೇ ಮರುಪರೀಕ್ಷೆ ನಡೆಸಬೇಕು ಎಂದು ಪ್ರತಿಭಟನಾಕಾರರ ಆಗ್ರಹಿಸಿದ್ದಾರೆ. ಪ್ರಾದೇಶಿಕ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆ ಕಚೇರಿ ಎದುರು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಫುಟ್ಪಾತ್ ತೆರವಿಗೆ ಹೋಗಿದ್ದ ಪಾಲಿಕೆ ಎಂಜಿನಿಯರ್ ಮೇಲೆ ಹಲ್ಲೆ – ಸ್ಥಳದಲ್ಲಿ ಬಿಗುವಿನ ವಾತಾವರಣ