ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾದರೆ ಸೂಕ್ತ ಕ್ರಮ: ಡಿಕೆಶಿ
ಬೆಂಗಳೂರು: 'ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ' ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋ

ಬೆಂಗಳೂರು: 'ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ' ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, 'ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ' ಎಂದು ಹೇಳಿದ್ದಾರೆ.'ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ' ಎಂದು ಭರವಸೆ ನೀಡಿದ್ದಾರೆ.ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ…— DK Shivakumar (@DKShivakumar) October 25, 2026 ಸ್ಟಿಂಗ್ ಕಾರ್ಯಾಚರಣೆ: ಮೊದಲ ಬೇಟೆ; ವಿಡಿಯೊ ಅಪ್ಲೋಡ್ ಮಾಡಿದ್ದ ರಿತೇಶ್ ಪಾಂಡೆKPSC ಹಗರಣ: ಘ್ಯಾನೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಸಿಎಂ ಡಿಕೆಶಿ ಅನುಮತಿ