ಸಿಯಾಂಗ್ ಯೋಜನೆಗೆ ವಿರೋಧ: ಅರುಣಾಚಲಕ್ಕೆ ಕ್ಷಿಪ್ರ ಕಾರ್ಯಪಡೆ ರವಾನಿಸಿದ ಕೇಂದ್ರ
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಪ್ರಸ್ತಾವಿತ 11,200 ಮೆಗಾವಾಟ್ ಸಿಯಾಂಗ್ ಬಹುಪಯೋಗಿ ಯೋಜನೆಯನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕ್ಷಿಪ್ರ ಕಾರ್ಯಪಡೆಗಳನ್ನು (ಆರ್ಎಎಫ್) ರವಾನಿಸಿದೆ ಎಂದು ವರದಿಯಾಗಿದೆ. ಕೇಂದ್ರ ಗೃಹ ಸಚಿವಾಲಯವು ಈ ಕುರಿತು ಆದೇಶ ಹೊರಡಿಸಿದೆ. ನವಿ ಮುಂಬೈನಿಂದ ಭಾರತೀಯ ವಾಯುಪಡ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಪ್ರಸ್ತಾವಿತ 11,200 ಮೆಗಾವಾಟ್ ಸಿಯಾಂಗ್ ಬಹುಪಯೋಗಿ ಯೋಜನೆಯನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕ್ಷಿಪ್ರ ಕಾರ್ಯಪಡೆಗಳನ್ನು (ಆರ್ಎಎಫ್) ರವಾನಿಸಿದೆ ಎಂದು ವರದಿಯಾಗಿದೆ. ಕೇಂದ್ರ ಗೃಹ ಸಚಿವಾಲಯವು ಈ ಕುರಿತು ಆದೇಶ ಹೊರಡಿಸಿದೆ. ನವಿ ಮುಂಬೈನಿಂದ ಭಾರತೀಯ ವಾಯುಪಡೆ ವಿಮಾನದ ಮೂಲಕ ಆರ್ಎಎಫ್ ಪಡೆಗಳ 250 ಯೋಧರನ್ನು ಅರುಣಾಚಲ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಹಲವು ಸಿಆರ್ಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆರ್ಎಎಫ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಯಾಂಗ್ ಬಹುಪಯೋಗಿ ಯೋಜನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಶುಕ್ರವಾರ ಹಿಂಸಾಚಾರಕ್ಕೆ ತಿರುಗಿದ್ದು, ಗುಂಪೊಂದು ಎನ್ಎಚ್ಪಿಸಿ ಕಚೇರಿ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿತ್ತು. ಜೊತೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸೇರಿದಂತೆ ಇಬ್ಬರು ರಾಜಕೀಯ ನಾಯಕರ ಮನೆಯನ್ನು ಧ್ವಂಸಗೊಳಿಸಲಾಗಿತ್ತು.‘ಪಾಸಿಘಾಟ್ನಲ್ಲಿ ಪ್ರತಿಭಟನಕಾರರು ಕಲ್ಲು ತೂರಾಟ ನಡೆಸಿದ ಪರಿಣಾಮ ಹಲವು ಪೊಲೀಸರು ಗಾಯಗೊಂಡಿದ್ದರು. ಮಚ್ಚು, ಲಾಠಿಗಳನ್ನು ಹಿಡಿದಿದ್ದ 150ರಿಂದ 200 ಪ್ರತಿಭಟನಕಾರರು ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿ, ಬ್ಯಾರಿಕೇಡ್ಗಳನ್ನು ಮುರಿದು ಭದ್ರತಾ ಸಿಬ್ಬಂದಿ ಮೇಲೆ ಕಲ್ಲುತೂರಾಟಕ್ಕೆ ಯತ್ನಿಸಿದ್ದರು.ಶಾಂತಿಯುತ ಪ್ರತಿಭಟನೆಯ ಹಕ್ಕು ಪ್ರಜಾಪ್ರಭುತ್ವದ ಅತ್ಯಗತ್ಯ ಭಾಗವಾಗಿದೆ ಎಂದು ಮುಖ್ಯಮಂತ್ರಿ ಪೆಮಾ ಖಂಡು ಹೇಳಿದ್ದಾರೆ. ಆದರೆ, ಪ್ರತಿಭಟನೆಗಳು ಕಾನೂನಿನ ಚೌಕಟ್ಟಿನೊಳಗೆ ಇರಬೇಕು. ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವ ಅಥವಾ ಸಾರ್ವಜನಿಕ ವ್ಯವಸ್ಥೆಗೆ ಅಡ್ಡಿಪಡಿಸುವಂತಿರಬಾರದು ಎಂದು ಅವರು ತಿಳಿಸಿದ್ದಾರೆ. ಪಾಸಿಘಾಟ್ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪೆಮಾ ಖಂಡು, ಸಮಾಜದ ಎಲ್ಲಾ ವರ್ಗದವರೂ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.ಸಿಯಾಂಗ್, ಅಪ್ಪರ್ ಸಿಯಾಂಗ್ ಮತ್ತು ಈಸ್ಟ್ ಸಿಯಾಂಗ್ ಜಿಲ್ಲೆಗಳಲ್ಲಿ ವಿದ್ಯುತ್ ಯೋಜನೆ ವಿರೋಧಿಸಿ ಕರೆ ನೀಡಲಾಗಿದ್ದ 12 ಗಂಟೆಗಳ ಬಂದ್ ಶುಕ್ರವಾರ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿತ್ತು. ಬಂದ್ ಮುಗಿದ ನಂತರ ಪಾಸಿಘಾಟ್ನಲ್ಲಿ ಗಲಭೆ ನಡೆದಿತ್ತು.ಟಿಬೆಟ್ ಮೂಲಕ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿ, ಮುಂದೆ ಅಸ್ಸಾಂನಲ್ಲಿ ಬ್ರಹ್ಮಪುತ್ರವಾಗಿ ಹರಿಯುವ ಸಿಯಾಂಗ್ ನದಿಗೆ ಅಡ್ಡಲಾಗಿ 11,200 ಮೆಗಾವಾಟ್ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುವ ಯೋಜನೆ ಇದಾಗಿದೆ. ಈ ಯೋಜನೆಯಿಂದ ಮನೆ ಹಾಗೂ ಕೃಷಿ ಭೂಮಿ ಕಳೆದುಕೊಳ್ಳುವ ಭೀತಿ ಮತ್ತು ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸ್ಥಳೀಯ ನಿವಾಸಿಗಳು