ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅ. 28ರಂದು ನೇರ ಸಂದರ್ಶನ
ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಕ್ಟೋಬರ್ 28ರಂದು ನೇರ ಸಂದರ್ಶನ ನಡೆಸುತ್ತಿದೆ.ಪೀಣ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿರುವ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಖಾಸಗಿ ಸಂಸ್ಥೆಗಳಲ್ಲಿ ಖಾಲ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಕ್ಟೋಬರ್ 28ರಂದು ನೇರ ಸಂದರ್ಶನ ನಡೆಸುತ್ತಿದೆ.ಪೀಣ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿರುವ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಕ್ಕೆ ನೇರ ಸಂದರ್ಶನ ನಡೆಯಲಿದೆ.ಎಸ್ಎಸ್ಎಲ್ಸಿ ಉತ್ತೀರ್ಣರಾದವರು, ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 35 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿಒಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 8970615380 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.