ಸಿದ್ದರಾಮಯ್ಯ ಒಂಟಿಯಾಗುವ ಪ್ರಶ್ನೆಯೇ ಇಲ್ಲ–ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ
ಬೆಂಗಳೂರು: ‘ಸಿದ್ದರಾಮಯ್ಯ ಅವರು ರಾಜಕೀಯವಾಗಿ ಒಂಟಿಯಾಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ನಮ್ಮ ಎಲ್ಲ ಶಾಸಕರು ಅವರೊಂದಿಗೆ ಇದ್ದಾರೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಾರ್ವಜನಿಕ ಬದುಕಿನಲ್ಲಿ ನಡೆಯಬಾರದಂತಹ ಘಟನೆಗಳನ್ನು ಎಲ್ಲರೂ ಖಂಡಿಸಬೇಕು. ಈ ವಿಚಾರದಲ್ಲಿ ನಾವೆಲ್ಲ

ಬೆಂಗಳೂರು: ‘ಸಿದ್ದರಾಮಯ್ಯ ಅವರು ರಾಜಕೀಯವಾಗಿ ಒಂಟಿಯಾಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ನಮ್ಮ ಎಲ್ಲ ಶಾಸಕರು ಅವರೊಂದಿಗೆ ಇದ್ದಾರೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಾರ್ವಜನಿಕ ಬದುಕಿನಲ್ಲಿ ನಡೆಯಬಾರದಂತಹ ಘಟನೆಗಳನ್ನು ಎಲ್ಲರೂ ಖಂಡಿಸಬೇಕು. ಈ ವಿಚಾರದಲ್ಲಿ ನಾವೆಲ್ಲ ಖಂಡಿಸಿದ್ದೇವೆ’ ಎಂದರು.‘ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ, ಈ ವಿಚಾರದಲ್ಲಿ ಈಗಲೇ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ತನಿಖೆ ಪೂರ್ಣಗೊಂಡು ವರದಿ ಹೊರಬಂದ ಬಳಿಕ ಸತ್ಯಾಂಶ ತಿಳಿಯಲಿದೆ’ ಎಂದ ಪರಮೇಶ್ವರ, ‘ರಾಜಕೀಯವಾಗಿ ಗುರಿಯಾಗಿಸಿಕೊಂಡು ಒಬ್ಬರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಯಾರೂ ಮಾಡಬಾರದು, ಇದು ಖಂಡನೀಯ’ ಎಂದರು.
Read the complete story at Prajavani